HomeBengaluru Newsಮದ್ಯಪಾನ ಮಾಡಿ ವಾಹನ ಚಾಲನೆ: ಒಂದು ವಾರದಲ್ಲಿ 45 ಸಾವಿರಕ್ಕೂ ಹೆಚ್ಚು ವಾಹನಗಳ ಪರಿಶೀಲನೆ!

ಮದ್ಯಪಾನ ಮಾಡಿ ವಾಹನ ಚಾಲನೆ: ಒಂದು ವಾರದಲ್ಲಿ 45 ಸಾವಿರಕ್ಕೂ ಹೆಚ್ಚು ವಾಹನಗಳ ಪರಿಶೀಲನೆ!

For Dai;y Updates Join Our whatsapp Group

Spread the love

ಬೆಂಗಳೂರು: ನಗರದಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸರು ಡ್ರಂಕ್ ಅಂಡ್ ಡ್ರೈವ್ ವಿರುದ್ಧ ಕಠಿಣ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಕಳೆದ ಒಂದು ವಾರದಿಂದ ನಗರದ ವಿವಿಧ ಭಾಗಗಳಲ್ಲಿ ವಿಶೇಷ ತಪಾಸಣೆ ನಡೆಸಿದ ಪೊಲೀಸರು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ.

ಮೇ 04ರಿಂದ ಮೇ 10ರವರೆಗೆ ನಡೆದ ವಿಶೇಷ ತಪಾಸಣೆಯಲ್ಲಿ ಒಟ್ಟು 45 ಸಾವಿರದ 272 ವಾಹನಗಳನ್ನು ಪರಿಶೀಲಿಸಲಾಗಿದೆ. ಬೈಕ್, ಕಾರು ಸೇರಿದಂತೆ ವಿವಿಧ ಮಾದರಿಯ ವಾಹನಗಳನ್ನು ತಪಾಸಣೆಗೊಳಪಡಿಸಿದ ಸಂಚಾರ ಪೊಲೀಸರು, ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಕಾರ್ಯಾಚರಣೆಯ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ 575 ಮಂದಿಯನ್ನು ಪತ್ತೆ ಹಚ್ಚಿ ಅವರ ವಿರುದ್ಧ ಡ್ರಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಿಸಲಾಗಿದೆ. ಇದೇ ವೇಳೆ ಅತೀ ವೇಗ ಹಾಗೂ ಅಜಾಗರೂಕ ಚಾಲನೆ ನಡೆಸಿದ ವಾಹನ ಸವಾರರ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ.

ಅತೀ ವೇಗ ಮತ್ತು ನಿರ್ಲಕ್ಷ್ಯ ಚಾಲನೆಗೆ ಸಂಬಂಧಿಸಿದಂತೆ ಕಳೆದ ಒಂದು ವಾರದಲ್ಲಿ 179 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಸುಮಾರು 1 ಲಕ್ಷ 80 ಸಾವಿರ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ನಿಯಂತ್ರಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿಯೂ ವಿಶೇಷ ತಪಾಸಣೆ ಮತ್ತು ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡದಂತೆ ಹಾಗೂ ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!