HomeCrime Newsಪ್ರೀತಿಗೆ ಕುಟುಂಬದ ವಿರೋಧ; ಧಾರವಾಡದಲ್ಲಿ ಯುವತಿ ವಿಷ ಸೇವಿಸಿ ಆತ್ಮಹತ್ಯೆ

ಪ್ರೀತಿಗೆ ಕುಟುಂಬದ ವಿರೋಧ; ಧಾರವಾಡದಲ್ಲಿ ಯುವತಿ ವಿಷ ಸೇವಿಸಿ ಆತ್ಮಹತ್ಯೆ

For Dai;y Updates Join Our whatsapp Group

Spread the love

ಧಾರವಾಡ: ಜಿಲ್ಲೆಯಲ್ಲಿ ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದು ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಶ್ವೇತಾ ಕೊಟೆನ್ನವರ್ (18) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.

ಮೃತ ಶ್ವೇತಾ ಹಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಷಯವನ್ನು ಕುಟುಂಬಸ್ಥರಿಗೆ ತಿಳಿಸಿ, ನಾಗರಾಜ್ ಅವರನ್ನು ಮದುವೆಯಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಳು.

ಆದರೆ, ಈ ಮದುವೆಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಶ್ವೇತಾ ತೀವ್ರವಾಗಿ ಮನನೊಂದಿದ್ದಳು. ಇದೇ ಬೇಸರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!