ಚೆನ್ನೈ: ಸೌತ್ ಸಿನಿರಂಗದ ಸ್ಟಾರ್ ನಟಿ ತ್ರಿಶಾ ಕೃಷ್ಣನ್ ಇದೀಗ ವೃತ್ತಿಜೀವನದ ಸುವರ್ಣ ಕಾಲವನ್ನು ಅನುಭವಿಸುತ್ತಿದ್ದಾರೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿರುವ ತ್ರಿಶಾ, ಈಗ ಸಂಭಾವನೆ ವಿಚಾರದಲ್ಲೂ ಹೊಸ ಮಟ್ಟ ತಲುಪಿದ್ದಾರೆ ಎನ್ನಲಾಗುತ್ತಿದೆ.
ಮೂಲಗಳ ಪ್ರಕಾರ, ತ್ರಿಶಾ ಈಗ ಒಂದು ಸಿನಿಮಾಗೆ ಸುಮಾರು 10ರಿಂದ 12 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ‘ಪೊನ್ನಿಯಿನ್ ಸೆಲ್ವನ್’, ‘ಲಿಯೋ’ ರೀತಿಯ ದೊಡ್ಡ ಸಿನಿಮಾಗಳ ಯಶಸ್ಸಿನ ಬಳಿಕ ಅವರ ಬೇಡಿಕೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಸದ್ಯ ಕಾಲಿವುಡ್ ಮತ್ತು ಟಾಲಿವುಡ್‌ನ ಪ್ರಮುಖ ನಿರ್ಮಾಪಕರು ಹಾಗೂ ನಿರ್ದೇಶಕರು ತ್ರಿಶಾ ಕಾಲ್‌ಶೀಟ್‌ಗಾಗಿ ಕಾಯುತ್ತಿದ್ದಾರೆ.
ಚಿರಂಜೀವಿ ಅಭಿನಯದ ‘ವಿಶ್ವಂಭರ’, ಸೂರ್ಯ ನಟನೆಯ ‘ಕರುಪ್ಪು’ ಸೇರಿದಂತೆ ಹಲವು ದೊಡ್ಡ ಸಿನಿಮಾಗಳಲ್ಲಿ ತ್ರಿಶಾ ಅಭಿನಯಿಸುತ್ತಿದ್ದಾರೆ. ಜೊತೆಗೆ ಕಮಲ್ ಹಾಸನ್ ಮತ್ತು ರಜನಿಕಾಂತ್ ಕಾಂಬಿನೇಷನ್‌ನ ಹೊಸ ಪ್ರಾಜೆಕ್ಟ್‌ಗೆ ಕೂಡ ಅವರ ಹೆಸರು ಕೇಳಿಬರುತ್ತಿದೆ.
ಹೊಸ ನಟಿಯರ ಪ್ರವೇಶದ ನಡುವೆಯೂ ತ್ರಿಶಾ ತಮ್ಮ ಸ್ಥಾನವನ್ನು ಗಟ್ಟಿಯಾಗಿ ಉಳಿಸಿಕೊಂಡಿದ್ದಾರೆ. ಗ್ಲಾಮರ್ ಮಾತ್ರವಲ್ಲದೇ ನಟನಾ ಸಾಮರ್ಥ್ಯವಿರುವ ಪಾತ್ರಗಳ ಮೂಲಕವೂ ಅವರು ಸಿನಿಪ್ರೇಕ್ಷಕರ ಮನಗೆದ್ದಿದ್ದಾರೆ.
ಇತ್ತೀಚೆಗೆ ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಜೊತೆಗಿನ ಅವರ ಆಪ್ತತೆ ಮತ್ತೆ ಚರ್ಚೆಗೆ ಕಾರಣವಾಗಿದೆ. ವಿಜಯ್ ರಾಜಕೀಯದಲ್ಲಿ ಭಾರೀ ಯಶಸ್ಸು ಸಾಧಿಸಿದ ಬಳಿಕ ತ್ರಿಶಾ ಜನಪ್ರಿಯತೆ ಮತ್ತು ಡಿಮ್ಯಾಂಡ್ ಇನ್ನಷ್ಟು ಹೆಚ್ಚಾಗಿದೆ ಎನ್ನುವ ಮಾತುಗಳು ಸಿನಿ ವಲಯದಲ್ಲಿ ಹರಿದಾಡುತ್ತಿವೆ.



