HomeEntertainmentಹೃದಯಾಘಾತಕ್ಕೆ ಬಲಿಯಾದ ನಟ ದಿಲೀಪ್ ರಾಜ್: ‘ಲವ್ ಮಾಕ್ಟೇಲ್ 3’ ಚಿತ್ರದ ಪಾತ್ರವೇ ಕೊನೆಯ ಅಭಿನಯ

ಹೃದಯಾಘಾತಕ್ಕೆ ಬಲಿಯಾದ ನಟ ದಿಲೀಪ್ ರಾಜ್: ‘ಲವ್ ಮಾಕ್ಟೇಲ್ 3’ ಚಿತ್ರದ ಪಾತ್ರವೇ ಕೊನೆಯ ಅಭಿನಯ

For Dai;y Updates Join Our whatsapp Group

Spread the love

ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ದಿಲೀಪ್ ರಾಜ್ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಸಿನಿರಂಗ ಹಾಗೂ ಅಭಿಮಾನಿಗಳ ವಲಯದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಸುಮಾರು 20 ವರ್ಷಗಳ ಕಾಲ ಸಿನಿಮಾ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ದಿಲೀಪ್ ರಾಜ್, ತಮ್ಮ ನಟನಾ ಜೀವನದ ಕೊನೆಯ ಹಂತದವರೆಗೂ ಹಲವು ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದ್ದರು. ‘ಮಿಲನ’ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಅಣ್ಣನಾಗಿ ಅಭಿನಯಿಸಿ ಅಪಾರ ಜನಪ್ರಿಯತೆ ಪಡೆದಿದ್ದ ಅವರು, ಇತ್ತೀಚೆಗೆ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ವಕೀಲನ ಪಾತ್ರ ನಿರ್ವಹಿಸಿದ್ದರು.

ಈ ಸಿನಿಮಾದಲ್ಲಿ ಗಂಭೀರ ಹಾಗೂ ಜವಾಬ್ದಾರಿಯುತ ಲಾಯರ್ ಆಗಿ ಅವರು ಕಾಣಿಸಿಕೊಂಡಿದ್ದರು. ಪಾತ್ರದ ತೂಕಕ್ಕೆ ತಕ್ಕ ಅಭಿನಯದ ಮೂಲಕ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು. ಚಾಕೊಲೇಟ್ ಹೀರೋ ಆಗಿ ಆರಂಭವಾದ ಅವರ ಸಿನಿ ಪಯಣ, ನಂತರ ಪೋಷಕ ಪಾತ್ರಗಳ ಮೂಲಕ ಮತ್ತಷ್ಟು ಗಟ್ಟಿಯಾದದ್ದು ವಿಶೇಷ.

ಡಬ್ಬಿಂಗ್ ಕಲಾವಿದ ಹಾಗೂ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದ ದಿಲೀಪ್ ರಾಜ್, ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ಮೂಲಕ ಅಪಾರ ಜನಪ್ರಿಯತೆ ಪಡೆದಿದ್ದರು. ಸರಳತೆ, ಶಿಸ್ತು ಮತ್ತು ನಗುಮುಖದಿಂದ ಗುರುತಿಸಿಕೊಂಡಿದ್ದ ಅವರು ಈಗ ಕೇವಲ ನೆನಪಾಗಿ ಉಳಿದಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!