ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಐಪಿಎಲ್ 2026ರ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದೆ.
ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿತು. ಅಂಗ್‌ಕ್ರಿಶ್ ರಘುವಂಶಿ 71 ರನ್ ಹಾಗೂ ರಿಂಕು ಸಿಂಗ್ ಅಜೇಯ 49 ರನ್‌ಗಳಿಸಿ ತಂಡಕ್ಕೆ ಬಲ ತುಂಬಿದರು. ಕ್ಯಾಮರೂನ್ ಗ್ರೀನ್ 32 ರನ್‌ಗಳ ಕೊಡುಗೆ ನೀಡಿದರು.
193 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿಗೆ ಆರಂಭಿಕ ಜೇಕಬ್ ಬೆಥೆಲ್ 15 ರನ್‌ಗಳಿಗೆ ಔಟಾದರು. ಬಳಿಕ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ದೇವದತ್ ಪಡಿಕ್ಕಲ್ 92 ರನ್‌ಗಳ ಜೊತೆಯಾಟ ನಡೆಸಿ ತಂಡಕ್ಕೆ ಬಲ ತುಂಬಿದರು. ಪಡಿಕ್ಕಲ್ 39 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು.
ಆ ಬಳಿಕ ರಜತ್ ಪಾಟೀದಾರ್ 11 ಹಾಗೂ ಟಿಮ್ ಡೇವಿಡ್ 2 ರನ್‌ಗಳಿಗೆ ಔಟಾದರೂ, ಒಂದೆಡೆ ಸ್ಥಿರ ಆಟವಾಡಿದ ಕೊಹ್ಲಿ 58 ಎಸೆತಗಳಲ್ಲಿ ಶತಕ ಪೂರೈಸಿದರು. ಕೊಹ್ಲಿ ಅಜೇಯ 105 ರನ್‌ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಜಿತೇಶ್ ಶರ್ಮಾ ಅಜೇಯ 8 ರನ್‌ಗಳಿಸಿದರು.
ಈ ಶತಕದೊಂದಿಗೆ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ತಮ್ಮ 9ನೇ ಶತಕ ದಾಖಲಿಸಿದರೆ, ಟಿ20 ಕ್ರಿಕೆಟ್‌ನಲ್ಲಿ 14 ಸಾವಿರ ರನ್‌ಗಳ ಮೈಲಿಗಲ್ಲು ಕೂಡ ತಲುಪಿದರು.
ಈ ಗೆಲುವಿನೊಂದಿಗೆ ಆರ್‌ಸಿಬಿ 12 ಪಂದ್ಯಗಳಿಂದ 16 ಅಂಕ ಕಲೆಹಾಕಿ ಪ್ಲೇಆಫ್ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದೆ.



