ಕೋಲಾರ: ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಬೈಕ್ ಬಾಕ್ಸ್ನಲ್ಲಿದ್ದ ಒಂದು ಲಕ್ಷ ರೂಪಾಯಿ ಹಣವನ್ನು ಕಳ್ಳರು ದೋಚಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ.
ಬೇತಮಂಗಲ ನ್ಯೂಟೌನ್ ನಿವಾಸಿ ರಮೇಶ್ ಅವರು ಕೆನರಾ ಬ್ಯಾಂಕ್ನಿಂದ ಹಣ ಡ್ರಾ ಮಾಡಿ ಬೈಕ್ ಬಾಕ್ಸ್ನಲ್ಲಿ ಇಟ್ಟು ಅಂಗಡಿಗೆ ತೆರಳಿದ್ದ ವೇಳೆ, ಹೊಂಚು ಹಾಕಿದ್ದ ಕಳ್ಳರು ಹಣವನ್ನು ಕದ್ದುಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಪೊಲೀಸ್ ಠಾಣೆಯ ಸಮೀಪವೇ ನಡೆದಿರುವುದು ಗಮನ ಸೆಳೆದಿದೆ.
ಘಟನೆ ವೇಳೆ ರಮೇಶ್ ಅವರ ಮಗ ಕಳ್ಳರನ್ನು ಗಮನಿಸಿ ಜೋರಾಗಿ ಕೂಗಿಕೊಂಡಿದ್ದು, ತಕ್ಷಣ ಸ್ಥಳೀಯರು ಎಚ್ಚೆತ್ತುಕೊಂಡು ಕಳ್ಳರನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಬಳಿಕ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.
ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪ್ರಕರಣ ಸಂಬಂಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ತನಿಖೆ ನಡೆಯುತ್ತಿದೆ. ಪೊಲೀಸ್ ಠಾಣೆ ಸಮೀಪವೇ ಘಟನೆ ನಡೆದಿದ್ದರೂ ತಕ್ಷಣ ಕ್ರಮ ಕೈಗೊಳ್ಳಲಿಲ್ಲ ಎಂಬ ಆರೋಪವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.



