ಮೌನಿ ರಾಯ್ ಮತ್ತು ಸೂರಜ್ ನಂಬಿಯಾರ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಇಬ್ಬರೂ ಇನ್‌ಸ್ಟಾಗ್ರಾಂನಲ್ಲಿ ಪರಸ್ಪರ ಅನ್‌ಫಾಲೋ ಮಾಡಿರುವುದು ಹಾಗೂ ಫೋಟೋಗಳನ್ನು ಅಳಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಕೆಲವು ಮಾಧ್ಯಮ ವರದಿಗಳ ಪ್ರಕಾರ, ಸೂರಜ್ ನಂಬಿಯಾರ್ ಅವರು ಮೌನಿ ರಾಯ್ ಅವರನ್ನು ಆರ್ಥಿಕವಾಗಿ ವಂಚಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ ಇಬ್ಬರ ನಡುವೆ ಸಂಬಂಧ ಹದಗೆಟ್ಟಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.
ಆದರೆ ಈ ಎಲ್ಲ ಆರೋಪಗಳು ಅಧಿಕೃತವಾಗಿ ದೃಢಪಟ್ಟಿಲ್ಲ. ಈ ಕುರಿತು ಮೌನಿ ಅಥವಾ ಸೂರಜ್ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ ಮೌನಿ ತಮ್ಮ ಇನ್‌ಸ್ಟಾಗ್ರಾಂ ಮೂಲಕ “ಸ್ವಲ್ಪ ಗೌಪ್ಯತೆ ನೀಡಿ” ಎಂದು ಮನವಿ ಮಾಡಿದ್ದಾರೆ ಎಂಬುದು ಗಮನ ಸೆಳೆದಿದೆ.
ಸೂರಜ್ ನಂಬಿಯಾರ್ ತಮ್ಮ ಖಾತೆಯನ್ನೇ ಅಳಿಸಿದ್ದಾರೆ ಎಂಬ ಮಾತುಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಬೆಳವಣಿಗೆಗಳ ನಡುವೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಮೌನಿ ರಾಯ್ 2022ರಲ್ಲಿ ಸೂರಜ್ ನಂಬಿಯಾರ್ ಅವರನ್ನು ವಿವಾಹವಾಗಿದ್ದರು. ಮದುವೆಗೆ ಮೊದಲು ಇಬ್ಬರೂ ಸುಮಾರು ಮೂರು ವರ್ಷಗಳ ಕಾಲ ಸಂಬಂಧದಲ್ಲಿದ್ದರು.



