HomeIndia Newsಲಾಯರ್ ಕೋಟ್‌ನಲ್ಲಿ ಹೈಕೋರ್ಟ್‌ಗೆ ಹಾಜರಾದ ಮಮತಾ ಬ್ಯಾನರ್ಜಿ

ಲಾಯರ್ ಕೋಟ್‌ನಲ್ಲಿ ಹೈಕೋರ್ಟ್‌ಗೆ ಹಾಜರಾದ ಮಮತಾ ಬ್ಯಾನರ್ಜಿ

For Dai;y Updates Join Our whatsapp Group

Spread the love

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಬಳಿಕ ನಡೆದ ಹಿಂಸಾಚಾರ ಪ್ರಕರಣದ ವಿಚಾರಣೆಗೆ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಲಾಯರ್ ಕೋಟ್ ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಹಾಜರಾಗಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಈ ಕುರಿತು ತೃಣಮೂಲ ಕಾಂಗ್ರೆಸ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, “ಮಮತಾ ಬ್ಯಾನರ್ಜಿ ನ್ಯಾಯ, ಸತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳಿಗಾಗಿ ಸದಾ ಹೋರಾಟ ನಡೆಸುತ್ತಿದ್ದಾರೆ. ಬಂಗಾಳದ ಜನರನ್ನು ಅವರು ಎಂದಿಗೂ ಕೈಬಿಡುವುದಿಲ್ಲ” ಎಂದು ಬರೆದುಕೊಂಡಿದೆ.

ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಸಾಚಾರ, ಬಾಂಬ್ ದಾಳಿ ಹಾಗೂ ಘರ್ಷಣೆಗಳು ನಡೆದಿದ್ದವು. ಈ ಘಟನೆಗಳಿಗೆ ಬಿಜೆಪಿ ಮತ್ತು ಟಿಎಂಸಿ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿವೆ.

ಇದರ ನಡುವೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ ಅವರನ್ನು ಮೇ 6ರಂದು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿರುವುದು ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ಈ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಹಾಗೂ ವಕೀಲ ಕಲ್ಯಾಣ್ ಬಂಡೋಪಾಧ್ಯಾಯ ಅವರ ಪುತ್ರ ಶಿರ್ಷಣ್ಯ ಬಂಡೋಪಾಧ್ಯಾಯ ಅವರು ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಹೆಚ್.ಸಿ. ಸುಜಯ್ ಪಾಲ್ ನೇತೃತ್ವದ ಪೀಠ ನಡೆಸುತ್ತಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!