ಬೆಂಗಳೂರು: ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದ್ದು, ಇದು ಅವರ ಪಾಲಿಗೆ ಮಹತ್ವದ ದಿನವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಬಳಿಕ ದರ್ಶನ್ ಸುಮಾರು ಎಂಟು ತಿಂಗಳಿನಿಂದ ಜೈಲಿನಲ್ಲಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನ ಅವ್ಯವಸ್ಥೆ, ಮಾನಸಿಕ ಹಿಂಸೆ ಹಾಗೂ ತನಿಖೆ ವಿಳಂಬದ ಆಧಾರದ ಮೇಲೆ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಪರ್ದಿವಾಲಾ ಪೀಠದಲ್ಲಿ ನಡೆಯಲಿದೆ.
ಕಾರಾಗೃಹ ಇಲಾಖೆ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ, “ದರ್ಶನ್ ಅವರನ್ನು ನಿರ್ಲಕ್ಷ್ಯ ಮಾಡಿಲ್ಲ. ಎಲ್ಲ ಕೈದಿಗಳಿಗೆ ಇರುವ ನಿಯಮಗಳನ್ನೇ ಪಾಲಿಸಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದೆ. ಭದ್ರತೆ ದೃಷ್ಟಿಯಿಂದ ಪ್ರತ್ಯೇಕ ಬ್ಯಾರಕ್ನಲ್ಲಿ ಇರಿಸಲಾಗಿದೆ ಎಂದು ತಿಳಿಸಿದೆ.
ಪ್ರಕರಣದ ವಿಚಾರಣೆ ನಿಯಮಿತವಾಗಿ ನಡೆಯುತ್ತಿದೆ. ವಾರಕ್ಕೆ ಎರಡು ಬಾರಿ ವಿಚಾರಣೆ ನಡೆಯುತ್ತಿರುವುದರಿಂದ ವಿಳಂಬ ಎಂಬ ಆರೋಪ ಸತ್ಯವಲ್ಲ ಎಂದು ಎಸ್ಪಿಪಿ ವರದಿಯಲ್ಲಿ ಹೇಳಲಾಗಿದೆ.
ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಲಿದ್ದು, ಇಂದು ಜಾಮೀನು ಸಿಕ್ಕರೆ ಅವರು ಜೈಲಿನಿಂದ ಹೊರಬರುವ ಸಾಧ್ಯತೆ ಇದೆ.



