HomeIndia Newsಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ಪರೀಕ್ಷೆ ಜಾರಿ: ಧರ್ಮೇಂದ್ರ ಪ್ರಧಾನ್ ಮಹತ್ವದ ಘೋಷಣೆ

ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ಪರೀಕ್ಷೆ ಜಾರಿ: ಧರ್ಮೇಂದ್ರ ಪ್ರಧಾನ್ ಮಹತ್ವದ ಘೋಷಣೆ

For Dai;y Updates Join Our whatsapp Group

Spread the love

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ ವಿಧಾನದಲ್ಲಿ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆಯ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಸ್ವೀಕರಿಸುತ್ತಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿನ ದೋಷಗಳನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ಈಗಾಗಲೇ ರದ್ದುಗೊಳಿಸಲಾಗಿದ್ದು, ಮರುಪರೀಕ್ಷೆಯನ್ನು ಜೂನ್ 21ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕ ಹಾಗೂ ಸುರಕ್ಷಿತಗೊಳಿಸುವ ಉದ್ದೇಶದಿಂದ ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಮೇ 7ರಂದು ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ದೂರು ಬಂದಿದ್ದು, ಪರೀಕ್ಷೆಗೆ ಮುನ್ನ ಕೆಲವೆಡೆ ಹಂಚಿಕೆಯಾಗಿದ್ದ ‘ಗೆಸ್ ಪೇಪರ್’ಗಳಲ್ಲಿ ಪರೀಕ್ಷೆಯಲ್ಲಿ ಬಂದ ಹಲವು ಪ್ರಶ್ನೆಗಳು ಇದ್ದವು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವಾಲಯ ತಕ್ಷಣವೇ ತನಿಖೆ ಆರಂಭಿಸಿ, ವಿವಿಧ ರಾಜ್ಯಗಳ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಸಂಗ್ರಹಿಸಿತ್ತು.

ಮೇ 12ರಂದು ‘ಗೆಸ್ ಪೇಪರ್’ ಹೆಸರಿನಲ್ಲಿ ಮೂಲ ಪ್ರಶ್ನೆಪತ್ರಿಕೆಯೇ ಸೋರಿಕೆಯಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮೇ 13ರಂದು ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು ಎಂದು ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮಗಳ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ವಿದ್ಯಾರ್ಥಿಗಳ ಹಕ್ಕುಗಳಿಗೆ ಧಕ್ಕೆಯಾಗಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಹಲವು ವರ್ಷಗಳಿಂದ ಸಕ್ರಿಯವಾಗಿರುವ ಪರೀಕ್ಷಾ ಮಾಫಿಯಾ ವಿರುದ್ಧ ಕಠಿಣ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!