ರಾಯಚೂರು: ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಮಾನವೀಯತೆಯನ್ನು ನಡುಗಿಸುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಆಕೆಯ ತಂದೆ ಹಾಗೂ ಆತನ ಸ್ನೇಹಿತನಿಂದಲೇ ನಿರಂತರವಾಗಿ ಎರಡು ವರ್ಷಗಳ ಕಾಲ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಬಾಲಕಿಯ ತಂದೆ ಅಮರೇಶ್ ಹಾಗೂ ಆತನ ಸ್ನೇಹಿತ ಸೀನು ಬಂಧಿತ ಆರೋಪಿಗಳಾಗಿದ್ದಾರೆ. ಇಬ್ಬರೂ ಸೇರಿ ವ್ಯವಸ್ಥಿತವಾಗಿ ಅಪ್ರಾಪ್ತೆಯ ಮೇಲೆ ದೌರ್ಜನ್ಯ ಎಸಗಿದರೆಂಬ ಆರೋಪ ದಾಖಲಾಗಿದೆ.
ಘಟನೆ ಬಹಿರಂಗವಾದ ಬಳಿಕ ಬಾಲಕಿಯನ್ನು ರಕ್ಷಿಸಿ ಸಾಂತ್ವನ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಆಕೆ ನೀಡಿದ ಹೇಳಿಕೆ ಆಧಾರದ ಮೇಲೆ ತನಿಖೆ ಮುಂದುವರಿಸಲಾಗಿದೆ.
ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.



