ಬೆಂಗಳೂರು: ಸಿಲಿಕಾನ್ ಸಿಟಿ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ.
ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಮಾಡಿಸಿಕೊಳ್ಳುವವರಿಗೆ ಗೈಡೆನ್ಸ್ ವ್ಯಾಲ್ಯೂ ದರದಲ್ಲಿ ಇಳಿಕೆ ಸೌಲಭ್ಯ ಇಂದಿನಿಂದ ಜಾರಿಯಾಗಿದೆ.
ಆಸ್ತಿಗಳ ಮೇಲೆ ವಿಧಿಸಲಾಗುತ್ತಿದ್ದ ಗೈಡೆನ್ಸ್ ವ್ಯಾಲ್ಯೂ ಶುಲ್ಕವನ್ನು 5% ನಿಂದ 2%ಗೆ ಇಳಿಕೆ ಮಾಡಲಾಗಿದ್ದು, ಈ ವಿಶೇಷ ಆಫರ್ ಇಂದಿನಿಂದ ಆರಂಭವಾಗಿ ಆಗಸ್ಟ್ 23ರವರೆಗೆ ಲಭ್ಯವಿರಲಿದೆ.
ಈಗಾಗಲೇ ಅರ್ಜಿ ಸಲ್ಲಿಸಿ ಅನುಮೋದನೆ ಪಡೆದಿದ್ದರೂ ಹಣ ಪಾವತಿ ಮಾಡದೇ ಇರುವವರಿಗೂ ಈ ಸೌಲಭ್ಯ ಅನ್ವಯವಾಗಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯ ಸರ್ಕಾರ ನೀಡಿರುವ ಈ 100 ದಿನಗಳ ಗಡುವು ಮುಗಿದ ಬಳಿಕ ಮತ್ತೆ ಹಿಂದಿನಂತೆ 5 ಶೇಕಡಾ ದರವೇ ಜಾರಿಗೆ ಬರಲಿದೆ. ಗಡುವು ಮುಗಿದ ನಂತರವೂ ಅಧಿಕಾರಿಗಳು ಕಡಿತ ದರದಲ್ಲಿ ಸೌಲಭ್ಯ ನೀಡಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.



