HomeDharwadಮತದಾರರ ಪಟ್ಟಿಗೆ ಮೆಗಾ ಮ್ಯಾಪಿಂಗ್ ಅಭಿಯಾನ..!

ಮತದಾರರ ಪಟ್ಟಿಗೆ ಮೆಗಾ ಮ್ಯಾಪಿಂಗ್ ಅಭಿಯಾನ..!

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಮೇ 17 ಮತ್ತು 18ರಂದು ಮೊದಲ ಹಂತ ಹಾಗೂ ಮೇ 23 ಮತ್ತು 24ರಂದು ಎರಡನೇ ಹಂತದ ವಿಶೇಷ ಅಭಿಯಾನ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, 2025ರ ಮತದಾರರ ಪಟ್ಟಿಯಲ್ಲಿ ನೋಂದಾಯಿತ 40 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಮತದಾರರು ಹಾಗೂ ಅವರ ಕುಟುಂಬ ಸದಸ್ಯರನ್ನು 2002ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮತ್ತು ಪ್ರೋಜೆನಿ (Linking and Progeny) ಮಾಡುವ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಈ ಮ್ಯಾಪಿಂಗ್ ಮತ್ತು ಪ್ರೋಜೆನಿ ಪ್ರಕ್ರಿಯೆ ಪೂರ್ಣಗೊಂಡಲ್ಲಿ ಅಂತಹ ಮತದಾರರಿಂದ ಪೂರಕ ದಾಖಲೆಗಳನ್ನು ಪಡೆಯದೇ ನೇರವಾಗಿ ಹೊಸ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಅವಕಾಶ ದೊರೆಯಲಿದೆ. ತಪ್ಪಿದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ವೇಳೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಹೆಸರು ಸೇರ್ಪಡೆ ಮಾಡಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಕೇಂದ್ರ ಅಥವಾ ರಾಜ್ಯ ಸರ್ಕಾರದ ಗುರುತಿನ ಚೀಟಿ, ಪಿಂಚಣಿ ಪಾವತಿ ಆದೇಶ, ಜನನ ಪ್ರಮಾಣಪತ್ರ, ಪಾಸ್‌ಪೋರ್ಟ್, ಶೈಕ್ಷಣಿಕ ಪ್ರಮಾಣಪತ್ರ, ಶಾಶ್ವತ ನಿವಾಸ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಕುಟುಂಬ ನೋಂದಣಿ, ಭೂಮಿ ಅಥವಾ ಮನೆ ಹಂಚಿಕೆ ದಾಖಲೆ ಸೇರಿದಂತೆ ವಿವಿಧ ದಾಖಲೆಗಳನ್ನು ಭಾರತ ಚುನಾವಣಾ ಆಯೋಗ ಮಾನ್ಯಗೊಳಿಸಿದೆ ಎಂದು ವಿವರಿಸಿದ್ದಾರೆ.
ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಮೇ 15ರವರೆಗೆ ಮ್ಯಾಪಿಂಗ್ ಕಾರ್ಯದಲ್ಲಿ ಶೇ. 66.99, ಪ್ರೋಜೆನಿ ಕಾರ್ಯದಲ್ಲಿ ಶೇ. 116.27 ಹಾಗೂ ಮ್ಯಾಪಿಂಗ್-ಲಿಂಕಿಂಗ್ ಪ್ರೋಜೆನಿ ಕಾರ್ಯದಲ್ಲಿ ಶೇ. 87.77 ಪ್ರಗತಿ ಸಾಧಿಸಲಾಗಿದೆ. ಇನ್ನೂ ಬಾಕಿ ಇರುವ ಮತದಾರರನ್ನು ಒಳಗೊಳ್ಳಲು ವಿಶೇಷ ಅಭಿಯಾನ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೇ 17-18 ಹಾಗೂ ಮೇ 23-24ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ 71-ಧಾರವಾಡ, 72-ಹುಬ್ಬಳ್ಳಿ-ಧಾರವಾಡ ಪೂರ್ವ, 73-ಹುಬ್ಬಳ್ಳಿ-ಧಾರವಾಡ ಕೇಂದ್ರ ಹಾಗೂ 74-ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.80ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿರುವ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳು ಹಾಜರಿದ್ದು ಮ್ಯಾಪಿಂಗ್ ಮತ್ತು ಪ್ರೋಜೆನಿ ಕಾರ್ಯ ಕೈಗೊಳ್ಳಲಿದ್ದಾರೆ.
ಸಾರ್ವಜನಿಕರು ತಮ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ತಮ್ಮ ಹಾಗೂ ಕುಟುಂಬ ಸದಸ್ಯರ ಹೆಸರುಗಳು ಮ್ಯಾಪಿಂಗ್ ಮತ್ತು ಪ್ರೋಜೆನಿ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಆಗದೇ ಇದ್ದಲ್ಲಿ ಸ್ಥಳದಲ್ಲಿಯೇ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮನವಿ ಮಾಡಿದ್ದಾರೆ.
“ಪ್ರತಿ ಮತದಾರರ ಹೆಸರು ಮ್ಯಾಪಿಂಗ್ ಮತ್ತು ಪ್ರೋಜೆನಿ ಪ್ರಕ್ರಿಯೆಯಲ್ಲಿ ಸೇರಬೇಕು. ಸಾರ್ವಜನಿಕರು ತಪ್ಪದೇ ಮತಗಟ್ಟೆಗಳಿಗೆ ಭೇಟಿ ನೀಡಿ ವಿವರಗಳನ್ನು ಖಚಿತಪಡಿಸಿಕೊಳ್ಳಬೇಕು.”
ಸ್ನೇಹಲ್ ಆರ್
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!