HomeKarnataka Newsಹರಪನಹಳ್ಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: 25ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಜನಜೀವನ ಅಸ್ತವ್ಯಸ್ತ

ಹರಪನಹಳ್ಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: 25ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಜನಜೀವನ ಅಸ್ತವ್ಯಸ್ತ

For Dai;y Updates Join Our whatsapp Group

Spread the love

ವಿಜಯನಗರ/ದಾವಣಗೆರೆ: ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯಿಂದ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಶೃಂಗಾರ ಗ್ರಾಮದಲ್ಲಿ 25ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, ಹಲವು ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

ಶನಿವಾರ ರಾತ್ರಿ ಸುರಿದ ಮಳೆಗೆ ಮನೆಗಳ ಮೇಲ್ಛಾವಣಿಗಳು ಹಾಗೂ ತಗಡಿನ ಶೀಟುಗಳು ಹಾರಿ ಹೋಗಿದ್ದು, ಕೆಲವು ಮನೆಗಳ ಪಕ್ಕದಲ್ಲಿದ್ದ ಮರಗಳ ಕೊಂಬೆಗಳು ಮನೆಗಳ ಮೇಲೆ ಬಿದ್ದು ಹಾನಿ ಉಂಟುಮಾಡಿವೆ.

ಭಾರೀ ಗಾಳಿ ಮತ್ತು ಮಳೆಯಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಕೆಲಕಾಲ ವಿದ್ಯುತ್ ವ್ಯತ್ಯಯವೂ ಉಂಟಾಗಿದೆ ಎಂದು ತಿಳಿದುಬಂದಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದೇ ವೇಳೆ ಉಚ್ಚಂಗಿ ಯಲ್ಲಮ್ಮ ದೇವಸ್ಥಾನ ಪ್ರದೇಶದಲ್ಲಿಯೂ ಉತ್ತಮ ಮಳೆಯಾಗಿದ್ದು, ದೇವಸ್ಥಾನದ ಮೆಟ್ಟಿಲುಗಳ ಮೇಲೆ ನೀರು ಹರಿದ ದೃಶ್ಯಗಳು ಕಂಡುಬಂದಿವೆ.

ಬೇಸಿಗೆಯ ತೀವ್ರ ಬಿಸಿಲಿನಿಂದ ಬಳಲುತ್ತಿದ್ದ ಜನರಿಗೆ ಈ ಮಳೆ ತಂಪು ತಂದಿದ್ದರೂ, ಬಿರುಗಾಳಿಯಿಂದ ಆಸ್ತಿ ಹಾನಿ ಉಂಟಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!