HomeKarnataka News94ನೇ ವಸಂತಕ್ಕೆ ಕಾಲಿಟ್ಟ HD ದೇವೇಗೌಡ: ಮೋದಿ, ಅಮಿತ್ ಶಾ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯಗಳ...

94ನೇ ವಸಂತಕ್ಕೆ ಕಾಲಿಟ್ಟ HD ದೇವೇಗೌಡ: ಮೋದಿ, ಅಮಿತ್ ಶಾ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯಗಳ ಮಹಾಪೂರ

For Dai;y Updates Join Our whatsapp Group

Spread the love

ಬೆಂಗಳೂರು:  ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಹಿರಿಯ ನಾಯಕ ಹೆಚ್.ಡಿ. ದೇವೇಗೌಡ ಅವರು ಇಂದು 94ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಹಾಗೂ ಪುತ್ರ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ಗಣ್ಯರು ಶುಭಾಶಯ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಎಕ್ಸ್’ ಖಾತೆಯ ಮೂಲಕ ದೇವೇಗೌಡರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದು, “ಹೆಚ್.ಡಿ. ದೇವೇಗೌಡ ಜೀ ಅವರಿಗೆ ಹಾರ್ದಿಕ ಜನ್ಮದಿನದ ಶುಭಾಶಯಗಳು. ಸಾರ್ವಜನಿಕ ಜೀವನದಲ್ಲಿ ದೀರ್ಘಕಾಲ ಸೇವೆ ಸಲ್ಲಿಸುವ ಮೂಲಕ ಅವರು ರಾಷ್ಟ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

ನೀತಿ ಸಂಬಂಧಿತ ವಿಷಯಗಳ ಬಗ್ಗೆ ಅವರ ಆಳವಾದ ಅರಿವು ಹಾಗೂ ಹಿಂದುಳಿದವರ ಸೇವೆಯ ಮೇಲಿನ ಬದ್ಧತೆ ಎಲ್ಲರಿಗೂ ಪರಿಚಿತವಾಗಿದೆ. ಅವರು ದೀರ್ಘಾಯುಷಿ ಹಾಗೂ ಆರೋಗ್ಯವಂತರಾಗಿರಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಬರೆದು ಶುಭ ಹಾರೈಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು ಕೂಡ ದೇವೇಗೌಡರ ದೀರ್ಘ ರಾಜಕೀಯ ಅನುಭವ ಮತ್ತು ಸಾರ್ವಜನಿಕ ಸೇವೆಯನ್ನು ಸ್ಮರಿಸಿ ಶುಭಾಶಯ ಸಲ್ಲಿಸಿದ್ದಾರೆ.

ಹುಟ್ಟುಹಬ್ಬದ ಅಂಗವಾಗಿ ದೇವೇಗೌಡರು ಬೆಳಿಗ್ಗೆ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಕುಟುಂಬ ಸದಸ್ಯರೊಂದಿಗೆ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ಈ ವೇಳೆ ದೇವೇಗೌಡರ ಮೊಮ್ಮಕ್ಕಳು ಪ್ರೀತಿಯ ಅಪ್ಪುಗೆ ನೀಡಿ ಶುಭಾಶಯ ಕೋರಿದ್ದು, ಕುಟುಂಬದವರೊಂದಿಗೆ ಆತ್ಮೀಯ ಕ್ಷಣಗಳನ್ನು ಹಂಚಿಕೊಂಡರು. ದೇವೇಗೌಡರ ನಿವಾಸಕ್ಕೆ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಲವು ಗಣ್ಯರು ಭೇಟಿ ನೀಡಿ ಶುಭಾಶಯ ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!