ನವದೆಹಲಿ: ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಸಂಭವಿಸಿ ಪ್ರಯಾಣಿಕರು ತೀವ್ರ ಅಸೌಕರ್ಯ ಅನುಭವಿಸಿದ ಘಟನೆ ಇಂದು ನಡೆದಿದೆ.
ವಿಮಾನದಲ್ಲಿ ಸುಮಾರು 25 ನಿಮಿಷಗಳ ಕಾಲ ಏರ್‌ಕಂಡಿಷನರ್ (AC) ಮತ್ತು ಕ್ಯಾಬಿನ್ ಲೈಟ್‌ಗಳು ಆಫ್ ಆಗಿದ್ದರಿಂದ ಸಂಪೂರ್ಣ ಕತ್ತಲೆ ಆವರಿಸಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಇದರಿಂದ ಒಳಗಿನ ಉಷ್ಣತೆ ಹೆಚ್ಚಾಗಿ ಉಸಿರುಗಟ್ಟುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಸಮಯದಲ್ಲಿ ಪ್ರಯಾಣಿಕರಲ್ಲಿ ಆತಂಕ ಹಾಗೂ ಗೊಂದಲ ಉಂಟಾಗಿದೆ. ಕೆಲ ಪ್ರಯಾಣಿಕರು ಘಟನೆಯ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ.
ಘಟನೆಯ ಕುರಿತು ವಿಮಾನಯಾನ ಸಂಸ್ಥೆಯಿಂದ ಅಧಿಕೃತ ಸ್ಪಷ್ಟನೆ ನಿರೀಕ್ಷಿಸಲಾಗುತ್ತಿದೆ.



