HomeDharwad“ಅಂತರ್‌ಜಿಲ್ಲಾ ಕಳ್ಳರ ಗ್ಯಾಂಗ್‌ಗೆ ಬಿಗ್ ಶಾಕ್!”

“ಅಂತರ್‌ಜಿಲ್ಲಾ ಕಳ್ಳರ ಗ್ಯಾಂಗ್‌ಗೆ ಬಿಗ್ ಶಾಕ್!”

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ಧಾರವಾಡ ಹಾಗೂ ಹಾವೇರಿ ಜಿಲ್ಲಾ ಪೊಲೀಸರ ಭರ್ಜರಿ ಜಂಟಿ ಕಾರ್ಯಾಚರಣೆಯಲ್ಲಿ ಅಂತರ್‌ರಾಜ್ಯ ಕಳ್ಳರ ಜಾಲವನ್ನು ಭೇದಿಸಿ, ಸುಮಾರು ₹1 ಕೋಟಿ 15 ಲಕ್ಷ ಮೌಲ್ಯದ ಬಂಗಾರ, ಬೆಳ್ಳಿ ಆಭರಣಗಳು ಹಾಗೂ ಕಳ್ಳತನದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಕಿರೇಸೂರ ಗ್ರಾಮದಲ್ಲಿ ಕಳೆದ ಎಪ್ರಿಲ್ ತಿಂಗಳಲ್ಲಿ ನಡೆದ ಮನೆ ಕಳ್ಳತನ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ನಡೆದ ಬಂಗಾರದ ಅಂಗಡಿ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಶಿವರಾಜ ಹನಮಂತಪ್ಪ ಮೋಡಕೇರ ಹಾಗೂ ಅಶೋಕ @ ರಮೇಶ್ ಶಿವಪ್ಪ ಕೊಂಚಿಕೊರವರ (ಅಂಬಾಮಠ, ಶಿಂದನೂರ ತಾಲೂಕು) ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಆರೋಪಿಗಳಿಂದ ೩೧೦ ಗ್ರಾಂ ಬಂಗಾರದ ಆಭರಣಗಳು, ೨೬ ಕೆ.ಜಿ. ಬೆಳ್ಳಿಯ ಆಭರಣಗಳು ಹಾಗೂ ತೆಲಂಗಾಣ ರಾಜ್ಯದಲ್ಲಿ ಕಳವು ಮಾಡಿದ್ದ ಬುಲೆರೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ ಹಾಗೂ ಹಾವೇರಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಯಶೋದಾ ವಂಟಗೋಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಧಾರವಾಡ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆ, ಡಿವೈಎಸ್‌ಪಿ ಶಿವಾನಂದ ಕಟಗಿ, ಡಿವೈಎಸ್‌ಪಿ ವಿನೋದ ಮುಕ್ತಧಾರ ನೇತೃತ್ವದಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್ ಮುರುಗೇಶ ಚನ್ನಣ್ಣವರ, ನವಲಗುಂದ ಸಿಪಿಐ ರವಿ ಕಪ್ಪತ್ತನವರ, ಹಾನಗಲ್ ಸಿಪಿಐ ಬಸವರಾಜ ಹಳಬಣ್ಣವರ, ಪಿಎಸ್‌ಐ ಇಮ್ರಾನ್ ಪಠಾಣ ಸೇರಿದಂತೆ ವಿವಿಧ ಠಾಣೆಗಳ ಸಿಬ್ಬಂದಿ ಚುರುಕಿನ ಕಾರ್ಯಾಚರಣೆ ನಡೆಸಿದರು.

ಒಟ್ಟು ಆರು ಜನ ಆರೋಪಿತರ ತಂಡದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಉಳಿದ ನಾಲ್ವರು ಆರೋಪಿತರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಪ್ರಕರಣವನ್ನು ಸಿನಿಮೀಯ ರೀತಿಯಲ್ಲಿ ಭೇದಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿ ಸೂಕ್ತ ಬಹುಮಾನ ಘೋಷಿಸಲಾಗಿದೆ ಎಂದು ಎಸ್‌ಪಿ ಗುಂಜನ್ ಆರ್ಯ ತಿಳಿಸಿದ್ದಾರೆ.

“ಜಿಲ್ಲೆಗಳ ನಡುವೆ ಸಮನ್ವಯದಿಂದ ಕಾರ್ಯಾಚರಣೆ ನಡೆಸಿದ ಪರಿಣಾಮ ದೊಡ್ಡ ಕಳ್ಳತನ ಜಾಲವನ್ನು ಭೇದಿಸಲು ಸಾಧ್ಯವಾಯಿತು.”

ಗುಂಜನ್ ಆರ್ಯ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!