HomeKarnataka Newsನಾಳೆ ರಾಜ್ಯಾದ್ಯಂತ ಮೆಡಿಕಲ್ ಶಾಪ್ ಬಂದ್‌: ಇಂದೇ ಔಷಧಿ ಖರೀದಿಸಿ!

ನಾಳೆ ರಾಜ್ಯಾದ್ಯಂತ ಮೆಡಿಕಲ್ ಶಾಪ್ ಬಂದ್‌: ಇಂದೇ ಔಷಧಿ ಖರೀದಿಸಿ!

For Dai;y Updates Join Our whatsapp Group

ಬೆಂಗಳೂರು: ರಾಜ್ಯದ ಜನತೆ ಗಮನಿಸಬೇಕಾದ ಮಹತ್ವದ ಬೆಳವಣಿಗೆಯೊಂದರಲ್ಲಿ, ನಾಳೆ ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಆಗಲಿವೆ.

ಆನ್‌ಲೈನ್ ಮೂಲಕ ನಡೆಯುತ್ತಿರುವ ಔಷಧಿ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ವ್ಯಾಪಾರಿಗಳ ಸಂಘ ದೇಶವ್ಯಾಪಿ ಬಂದ್‌ಗೆ ಕರೆ ನೀಡಿದ್ದು, ಕರ್ನಾಟಕ ಔಷಧಿ ಮಾರಾಟ ವ್ಯಾಪಾರಿಗಳ ಸಂಘವೂ ಇದಕ್ಕೆ ಬೆಂಬಲ ಸೂಚಿಸಿದೆ.

ರಾಜ್ಯದಲ್ಲಿ 26 ಸಾವಿರಕ್ಕೂ ಹೆಚ್ಚು ಮೆಡಿಕಲ್ ಅಂಗಡಿಗಳು ಮೇ 20ರಂದು ರಾತ್ರಿ 12.01ರಿಂದ 11.59ರವರೆಗೆ ಸಂಪೂರ್ಣ ಬಂದ್ ಆಗಲಿವೆ. ಹೀಗಾಗಿ ಜನರು ಅಗತ್ಯ ಔಷಧಿಗಳನ್ನು ಇಂದೇ ಖರೀದಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

ಬ್ಲಿಂಕಿಟ್, ಸ್ವಿಗ್ಗಿ, ಜೋಮಾಟೋ ಸೇರಿದಂತೆ ವಿವಿಧ ಆಪ್ ಆಧಾರಿತ ಸಂಸ್ಥೆಗಳು ಆನ್‌ಲೈನ್ ಮೂಲಕ ಔಷಧಿಗಳನ್ನು ಮಾರಾಟ ಮಾಡುತ್ತಿರುವುದು ಪರವಾನಗಿ ಪಡೆದ ಮೆಡಿಕಲ್ ಮಾಲೀಕರ ಬದುಕಿಗೆ ದೊಡ್ಡ ಹೊಡೆತ ನೀಡುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ.

ಕೋವಿಡ್ ಅವಧಿಯಲ್ಲಿ ನೀಡಲಾದ ತಾತ್ಕಾಲಿಕ ಅನುಮತಿಯನ್ನು ಕೆಲ ಕಂಪನಿಗಳು ಶಾಶ್ವತ ವ್ಯವಹಾರವನ್ನಾಗಿ ಮಾಡಿಕೊಂಡಿದ್ದು, ನಕಲಿ ಪ್ರಿಸ್ಕ್ರಿಪ್ಷನ್ ಬಳಕೆ, ನಿಯಂತ್ರಣರಹಿತ ಔಷಧಿ ವಿತರಣೆ, ಆಂಟಿಬಯೋಟಿಕ್ ದುರುಪಯೋಗ ಮತ್ತು ನಕಲಿ ಔಷಧಿಗಳ ಅಪಾಯ ಹೆಚ್ಚುತ್ತಿದೆ ಎಂದು ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ.

ಜಿಎಸ್‌ಆರ್ 220(ಇ) ಹಾಗೂ ಜಿಎಸ್‌ಆರ್ 817(ಇ) ಆದೇಶಗಳನ್ನು ಹಿಂಪಡೆಯಬೇಕು, ಅಕ್ರಮ ಇ-ಫಾರ್ಮಸಿ ಸೇವೆಗಳನ್ನು ಬಂದ್ ಮಾಡಬೇಕು ಹಾಗೂ ಸಣ್ಣ ವ್ಯಾಪಾರಿಗಳನ್ನು ರಕ್ಷಿಸಬೇಕು ಎಂಬುದು ವ್ಯಾಪಾರಿಗಳ ಪ್ರಮುಖ ಬೇಡಿಕೆಯಾಗಿದೆ.

ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಮೆಡಿಕಲ್ ಶಾಪ್‌ಗಳು ಬಂದ್ ಆಗುತ್ತಿರುವ ಹಿನ್ನೆಲೆ, ಸಾರ್ವಜನಿಕರ ಮೇಲಿನ ಪರಿಣಾಮ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img