ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಸತತ ಇಳಿಕೆಯ ಬಳಿಕ ಮಂಗಳವಾರ ಗ್ರಾಮ್‌ಗೆ 75 ರೂ. ಹೆಚ್ಚಳವಾಗಿದ್ದು, ಕಳೆದ ಹತ್ತು ದಿನಗಳಲ್ಲಿ ಒಟ್ಟಾರೆ ಸುಮಾರು 430 ರೂ. ಏರಿಕೆಯಾಗಿದೆ ಎಂದು ಮಾರುಕಟ್ಟೆ ವರದಿಗಳು ತಿಳಿಸಿವೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವದಿಂದ ಭಾರತದಲ್ಲಿಯೂ ಚಿನ್ನದ ಬೆಲೆಯಲ್ಲಿ ಚಲನವಲನ ಮುಂದುವರಿದಿದೆ. ಇತ್ತ ಬೆಳ್ಳಿ ದರದಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದ್ದು, ನಿನ್ನೆ ಏರಿಕೆಯಾದ ಬಳಿಕ ಇವತ್ತು 100 ಗ್ರಾಮ್‌ಗೆ 5 ರೂ. ಕುಸಿತವಾಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,43,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,57,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,43,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,704 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,395 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,778 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,704 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,395 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ.



