ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿ ನಡೆದ ಕಾಡಾನೆಗಳ ಕಾದಾಟದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದೆ.
ನಿನ್ನೆ ಮಾವುತರು ಸ್ನಾನಕ್ಕೆಂದು ಕಾವೇರಿ ನದಿಗೆ ಕಂಜನ್ ಮತ್ತು ಮಾರ್ತಾಂಡ ಆನೆಗಳನ್ನು ಕರೆತಂದಿದ್ದ ಸಂದರ್ಭದಲ್ಲಿ ಅವುಗಳ ನಡುವೆ ಕಾದಾಟ ಸಂಭವಿಸಿತ್ತು. ಈ ದುರಂತದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರು. ಜೊತೆಗೆ ಮಾರ್ತಾಂಡ ಆನೆಗೂ ಗಂಭೀರ ಗಾಯಗಳಾಗಿದ್ದವು.
ಶಿಬಿರದಲ್ಲೇ ತಕ್ಷಣ ಚಿಕಿತ್ಸೆ ನೀಡಲಾಗಿದ್ದರೂ ಆನೆ ಆರೋಗ್ಯ ಸ್ಥಿತಿ ಚಿಂತಾಜನಕವಾಗಿಯೇ ಇತ್ತು. ಆದರೆ ಎಲ್ಲಾ ಪ್ರಯತ್ನಗಳ ನಡುವೆಯೂ ಇಂದು ಮಾರ್ತಾಂಡ ಆನೆ ಕೊನೆಯುಸಿರೆಳೆದಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಡಿಎಫ್ಒ ಅಭಿಶೇಕ್ ಮಾಹಿತಿ ನೀಡಿದ್ದು, ಘಟನೆಯಿಂದ ಶಿಬಿರದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.



