ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು, ಗದಗ ಜಿಲ್ಲಾ ಘಟಕದ 2026-2031ನೇ ಅವಧಿಗೆ ನಡೆದ ನೂತನ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವ್ಹಿ.ಎಂ. ಹಿರೇಮಠ ಅವರು ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಬುಧವಾರ ಜರುಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ವಿಶ್ವನಾಥ ಜಿ. ಉಳ್ಳಾಗಡ್ಡಿ, ಕೋಶಾಧ್ಯಕ್ಷರಾಗಿ ಬಿ.ಬಿ. ಹಡಪದ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಮಹೇಶ ಎಸ್. ಕುರಿಯವರ ಹಾಗೂ ಶ್ರೀಮತಿ ಬಿ.ಎನ್. ಕ್ಯಾತನಗೌಡರ, ಸಹ ಕಾರ್ಯದರ್ಶಿಯಾಗಿ ಶ್ರೀಮತಿ ಐ.ಕೆ. ಮೋಟಗಿ, ಸಂಘಟನಾ ಕಾರ್ಯದರ್ಶಿಗಳಾಗಿ ಎಸ್.ಎಫ್. ಮಠದ ಹಾಗೂ ಶ್ರೀಮತಿ ಮಧುಮತಿ ಎಸ್. ಕರ್ಜಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ಎಸ್.ಬಿ. ಚವಡಿ ತಿಳಿಸಿದ್ದಾರೆ.
“ಶಿಕ್ಷಕರ ಸಂಘದ ಬಲವರ್ಧನೆ ಹಾಗೂ ಶಿಕ್ಷಕರ ಹಿತಾಸಕ್ತಿಗಾಗಿ ನೂತನ ಪದಾಧಿಕಾರಿಗಳು ಇನ್ನಷ್ಟು ಪರಿಣಾಮಕಾರಿ ಕಾರ್ಯ ನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವಿದೆ” ಎಂದು ಶಿಕ್ಷಕರ ಸಂಘದ ಮುಖಂಡರು ಅಭಿಪ್ರಾಯಪಟ್ಟರು.
ಅವಿರೋಧವಾಗಿ ಆಯ್ಕೆಯಾದ ಎಲ್ಲ ಪದಾಧಿಕಾರಿಗಳಿಗೆ ಜಿಲ್ಲೆಯ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದು, ಅವರ ಅಧಿಕಾರಾವಧಿಯಲ್ಲಿ ಸಂಘದ ಅಭಿವೃದ್ಧಿಗೆ ಉತ್ತಮ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದ್ದಾರೆ.



