ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿ ನಡೆದಿದೆ.
ದಾಳಿ ನಡೆಸಿದ ಪೊಲೀಸರು 860 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಕಂಟನಕುಂಟೆ ಗ್ರಾಮದ ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ. ಅಕ್ರಮವಾಗಿ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಇನ್ಸಪೆಕ್ಟರ್ ಎಂ.ಬಿ. ನವೀನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ದಾಳಿಯಲ್ಲಿ ಪಿಎಸ್‌ಐ ಸುಮಂತ್ ಹಾಗೂ ಸಿಬ್ಬಂದಿಗಳಾದ ಪ್ರೀತಿ, ಚಂದ್ರು, ಸುನೀಲ್, ನಟರಾಜ್ ಮತ್ತು ಪ್ರವೀಣ್ ಭಾಗವಹಿಸಿದ್ದರು.
ಪೊಲೀಸರ ಈ ಕಾರ್ಯಾಚರಣೆಗೆ ಸ್ಥಳೀಯ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



