HomeIndia Newsಕರ್ನಾಟಕದ 4 ಸ್ಥಾನ ಸೇರಿ, ರಾಜ್ಯಸಭೆಯ 24 ಸ್ಥಾನಗಳ ಚುನಾವಣೆಗೆ ದಿನಾಂಕ ಘೋಷಣೆ

ಕರ್ನಾಟಕದ 4 ಸ್ಥಾನ ಸೇರಿ, ರಾಜ್ಯಸಭೆಯ 24 ಸ್ಥಾನಗಳ ಚುನಾವಣೆಗೆ ದಿನಾಂಕ ಘೋಷಣೆ

For Dai;y Updates Join Our whatsapp Group

Spread the love

ನವದೆಹಲಿ/ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಜೂನ್ 18ರಂದು ಮತದಾನ ನಡೆಯಲಿದ್ದು, ಕರ್ನಾಟಕದ ನಾಲ್ಕು ಸ್ಥಾನಗಳಿಗೂ ಚುನಾವಣೆ ನಡೆಯಲಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರಿದಂತೆ ಹಲವು ಹಾಲಿ ಸದಸ್ಯರ ಅವಧಿ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತಿದೆ.

ಚುನಾವಣೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಜೂನ್ 1ರಂದು ಹೊರಡಿಸಲಾಗುತ್ತದೆ. ಜೂನ್ 1ರಿಂದ 8ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಜೂನ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 11ರವರೆಗೆ ನಾಮಪತ್ರ ಹಿಂಪಡೆಯಲು ಕಾಲಾವಕಾಶ ಇರುತ್ತದೆ.

ಜೂನ್ 18ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆಯೂ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಜೂನ್ 20ರೊಳಗೆ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ರಾಜ್ಯವಾರು ನೋಡಿದರೆ ಕರ್ನಾಟಕ, ಆಂಧ್ರಪ್ರದೇಶ ಹಾಗೂ ಗುಜರಾತ್ ರಾಜ್ಯಗಳಲ್ಲಿ ತಲಾ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ ಮೂರು ಸ್ಥಾನಗಳು ಖಾಲಿಯಾಗಲಿವೆ.

ಇನ್ನೂ ಜಾರ್ಖಂಡ್‌ನಲ್ಲಿ ಎರಡು ಸ್ಥಾನಗಳಿಗೆ ಹಾಗೂ ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಇದೇ ವೇಳೆ, ಜಾರ್ಖಂಡ್, ತಮಿಳುನಾಡು ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ನಿವೃತ್ತಿಯಾಗಲಿರುವ ಸದಸ್ಯರಲ್ಲಿ ಬಿಜೆಪಿಯ 11 ಮಂದಿ ಹಾಗೂ ಕಾಂಗ್ರೆಸ್‌ನ ನಾಲ್ವರು ಸಂಸದರು ಸೇರಿದ್ದಾರೆ. ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ್ ಸಿಂಗ್ ಹಾಗೂ ಎಚ್.ಡಿ. ದೇವೇಗೌಡರ ಅವಧಿಯೂ ಅಂತ್ಯಗೊಳ್ಳಲಿದೆ.

ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ವಿಶೇಷ ಸೂಚನೆಗಳನ್ನು ನೀಡಿರುವ ಚುನಾವಣಾ ಆಯೋಗ, ಮತದಾನದ ವೇಳೆ ಚುನಾವಣಾಧಿಕಾರಿಗಳು ನೀಡುವ ವಿಶೇಷ ನೇರಳೆ ಬಣ್ಣದ ಸ್ಕೆಚ್ ಪೆನ್ ಅನ್ನು ಮಾತ್ರ ಬಳಸಬೇಕು ಎಂದು ಸ್ಪಷ್ಟಪಡಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!