ವಿಜಯಸಾಕ್ಷಿ ಸುದ್ದಿ, ಗದಗ: ಕನ್ನಡ ಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಯಾಗಿ ಗದಗ ಜಿಲ್ಲೆಯ ಯುವ ಮುಖಂಡ ಪ್ರಭುರಾಜಗೌಡ ವಿ. ಪಾಟೀಲ ಅವರನ್ನು ನೇಮಕ ಮಾಡಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟದಲ್ಲಿ ಕನ್ನಡ ಜಾಗೃತಿ ವೇದಿಕೆ ವತಿಯಿಂದ ಆಯೋಜಿಸಿದ್ದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳ ಒಂದು ದಿನದ ಕಾರ್ಯಾಗಾರದಲ್ಲಿ ಈ ಘೋಷಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಕೆ. ಮಂಜುನಾಥ ದೇವ ಅವರು ನೇಮಕಾತಿ ಆದೇಶ ನೀಡಿ ಮಾತನಾಡಿ, “ಪ್ರಭುರಾಜಗೌಡ ಪಾಟೀಲ ಅವರು ಕಳೆದ ಎರಡು ದಶಕಗಳಿಂದ ಕನ್ನಡ ನಾಡು–ನುಡಿ, ರೈತಪರ ಹೋರಾಟ ಹಾಗೂ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ” ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಕನ್ನಡ ಮುನ್ನಡೆ, ಕಾನೂನು ಅರಿವು, ಸಂಘಟನೆಯ ಉದ್ದೇಶಗಳು ಹಾಗೂ ಪದಾಧಿಕಾರಿಗಳ ಜವಾಬ್ದಾರಿಗಳ ಕುರಿತು ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ರಾಜ್ಯ ಪದಾಧಿಕಾರಿಗಳು, ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ಅಧ್ಯಕ್ಷರು, ಮಹಿಳಾ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.



