HomeKarnataka Newsಬಂಗಾರ ಖರೀದಿಸೋರಿಗೆ ಭರ್ಜರಿ ಗುಡ್ ​ನ್ಯೂಸ್​​: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ!

ಬಂಗಾರ ಖರೀದಿಸೋರಿಗೆ ಭರ್ಜರಿ ಗುಡ್ ​ನ್ಯೂಸ್​​: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ!

For Dai;y Updates Join Our whatsapp Group

Spread the love

ಬೆಂಗಳೂರು: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಪರಿಣಾಮ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿದ್ದು, ಹಣದುಬ್ಬರದ ಆತಂಕವೂ ಹೆಚ್ಚಾಗಿದೆ. ಇದರ ಪರಿಣಾಮ ಅಮೂಲ್ಯ ಲೋಹಗಳ ಮಾರುಕಟ್ಟೆಯ ಮೇಲೂ ಕಂಡುಬಂದಿದ್ದು, ಚಿನ್ನದ ದರದಲ್ಲಿ ಇಳಿಕೆ ದಾಖಲಾಗಿದೆ.

ಮೇ 23, 2026 ಶನಿವಾರದಂದು 24 ಕ್ಯಾರೆಟ್ ಚಿನ್ನದ ದರದಲ್ಲಿ 10 ಗ್ರಾಂಗೆ ₹430 ಇಳಿಕೆಯಾಗಿದ್ದು, ಪ್ರಸ್ತುತ ಬೆಲೆ ₹1,59,060 ಆಗಿದೆ. ಅದೇ ರೀತಿ 1 ಗ್ರಾಂ ಚಿನ್ನದ ದರ ₹43 ಇಳಿಕೆಯಾಗಿ ₹15,906ಕ್ಕೆ ತಲುಪಿದೆ.

22 ಕ್ಯಾರೆಟ್ ಚಿನ್ನದ ದರವೂ ಇಳಿಕೆ ಕಂಡಿದ್ದು, 1 ಗ್ರಾಂಗೆ ₹40 ಕಡಿಮೆಯಾಗಿ ₹14,580 ಆಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹400 ಇಳಿಕೆಯಾಗಿ ₹1,45,800ಕ್ಕೆ ತಲುಪಿದೆ.

ಇನ್ನೊಂದೆಡೆ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರತಿ ಗ್ರಾಂ ಬೆಳ್ಳಿ ಬೆಲೆ ₹285 ಆಗಿದ್ದು, ಹಿಂದಿನ ದರವೇ ಮುಂದುವರಿದಿದೆ. ಒಂದು ಕೆಜಿ ಬೆಳ್ಳಿ ಬೆಲೆ ₹2.85 ಲಕ್ಷದಷ್ಟಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!