HomeCrime Newsನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

For Dai;y Updates Join Our whatsapp Group

Spread the love

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.

ಮೃತ ಯುವತಿಯನ್ನು ಭಾಗ್ಯಶ್ರೀ (18) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಕಲಬುರಗಿ ನಗರದ ಕೋರ್ಟ್ ವೃತ್ತದ ಬಳಿ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಭಾಗ್ಯಶ್ರೀ ಇತ್ತೀಚೆಗೆ ನಡೆದ NEET ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದಳು. ದ್ವಿತೀಯ ಪಿಯುಸಿಯಲ್ಲಿ ಶೇಕಡಾ 92 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದ ಆಕೆ ವೈದ್ಯಕೀಯ ಶಿಕ್ಷಣದ ಮೇಲೆ ದೊಡ್ಡ ಆಸೆ ಹೊಂದಿದ್ದಳು.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಪರೀಕ್ಷಾ ಫಲಿತಾಂಶದ ಆತಂಕ ಅಥವಾ ಮಾನಸಿಕ ಒತ್ತಡ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಘಟನೆ ಕುರಿತು ಮೃತಳ ತಂದೆ ರಾಜಶೇಖರ್ ಪ್ರತಿಕ್ರಿಯಿಸಿ, ಮಗಳು ಯಾವುದೇ ಸಮಸ್ಯೆ ಇಲ್ಲದೆ ಸಂತೋಷವಾಗಿದ್ದಳು ಎಂದು ತಿಳಿಸಿದ್ದಾರೆ. “ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ” ಎಂದು ಅವರು ಕಣ್ಣೀರು ಹಾಕಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಕಲಬುರಗಿ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!