HomeWorld Newsಪ್ರಯಾಣಿಕ ರೈಲಿನ ಮೇಲೆ ಆತ್ಮಾಹುತಿ ದಾಳಿ! 24 ಜನ ಸಾವು, 70 ಮಂದಿಗೆ ಗಾಯ

ಪ್ರಯಾಣಿಕ ರೈಲಿನ ಮೇಲೆ ಆತ್ಮಾಹುತಿ ದಾಳಿ! 24 ಜನ ಸಾವು, 70 ಮಂದಿಗೆ ಗಾಯ

For Dai;y Updates Join Our whatsapp Group

Spread the love

ಇಸ್ಲಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಲ್ಲಿ ರೈಲ್ವೆ ಹಳಿ ಬಳಿ ಭೀಕರ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದ್ದು, ಕನಿಷ್ಠ 24 ಮಂದಿ ಮೃತಪಟ್ಟಿದ್ದಾರೆ ಹಾಗೂ 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮತ್ತು ರಕ್ಷಣಾ ಪಡೆಗಳು ದೃಢಪಡಿಸಿವೆ.

ಕ್ವೆಟ್ಟಾದ ಚಮನ್ ಫಾಟಕ್ ರೈಲ್ವೆ ನಿಲ್ದಾಣದ ಬಳಿ ಈ ಸ್ಫೋಟ ಸಂಭವಿಸಿದೆ. ಭದ್ರತಾ ಸಿಬ್ಬಂದಿ ಹಾಗೂ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಸ್ಫೋಟದ ತೀವ್ರತೆಗೆ ರೈಲಿನ ಎರಡು ಬೋಗಿಗಳು ಸಂಪೂರ್ಣವಾಗಿ ಜಖಂಗೊಂಡಿದ್ದು, ಬೆಂಕಿ ಹೊತ್ತಿಕೊಂಡ ಘಟನೆ ಕೂಡ ನಡೆದಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಸದ್ದು ಕೇಳಿಸಿಕೊಂಡಿದ್ದು, ಹಲವಾರು ಕಿಲೋಮೀಟರ್ ದೂರದವರೆಗೆ ಕಂಪನ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆ ಬಳಿಕ ಬಲೂಚಿಸ್ತಾನ್ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ತಕ್ಷಣ ಕ್ವೆಟ್ಟಾದ ಮಿಲಿಟರಿ ಆಸ್ಪತ್ರೆ ಮತ್ತು ಇತರ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹಲವಾರು ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ರಕ್ತದಾನಕ್ಕೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಸ್ಫೋಟದಿಂದ ರೈಲ್ವೆ ಹಳಿಯ ಪಕ್ಕದಲ್ಲಿದ್ದ ವಾಹನಗಳು ಹಾಗೂ ಮನೆಗಳು ಸಹ ಹಾನಿಗೊಳಗಾಗಿವೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಲೂಚಿಸ್ತಾನ್ ಗೃಹ ಸಚಿವಾಲಯದ ವಕ್ತಾರರು ಘಟನೆಯನ್ನು ನಿಯಂತ್ರಣಕ್ಕೆ ತರಲು ಭದ್ರತಾ ಪಡೆಗಳನ್ನು ಹೈ ಅಲರ್ಟ್‌ನಲ್ಲಿ ಇಡಲಾಗಿದೆ ಎಂದು ತಿಳಿಸಿದ್ದಾರೆ.

ಈ ದಾಳಿಯ ಹೊಣೆಯನ್ನು ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA) ಸಂಘಟನೆ ಹೊತ್ತುಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸೇನಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ದಾಳಿ ನಡೆಸಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಘಟನೆಯ ಬಳಿಕ ಪ್ರದೇಶದಲ್ಲಿ ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆ ಮುಂದುವರೆಸಿವೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!