ಛತ್ತೀಸ್‌ಗಢದ: ಬಿಲಾಸ್‌ಪುರದಲ್ಲಿ ಕೌಟುಂಬಿಕ ಕಲಹ ಭೀಕರ ತಿರುವು ಪಡೆದುಕೊಂಡಿದ್ದು, ವಿವಾಹೇತರ ಸಂಬಂಧದ ಅನುಮಾನ ಹಿನ್ನೆಲೆ ಪತ್ನಿಯೊಬ್ಬಳು ಗಾಢ ನಿದ್ದೆಯಲ್ಲಿದ್ದ ಪತಿಯ ಖಾಸಗಿ ಅಂಗವನ್ನು ಕತ್ತಿಯಿಂದ ದಾಳಿ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ದಾಳಿಯಲ್ಲಿ ಪತಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡ ವ್ಯಕ್ತಿಯನ್ನು ರಾಜೇಶ್ ಕೌಶಿಕ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮೇಸ್ತ್ರಿಯಾಗಿರುವ ರಾಜೇಶ್ ಮೇಲೆ ಅವರ ಪತ್ನಿ ದ್ರೌಪದಿ ಬಾಯಿ ದಾಳಿ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿಯ ನಡುವೆ ಕಳೆದ ಕೆಲವು ತಿಂಗಳಿಂದ ನಿರಂತರ ಕೌಟುಂಬಿಕ ಜಗಳಗಳು ನಡೆಯುತ್ತಿದ್ದು, ರಾಜೇಶ್‌ಗೆ ಬೇರೆ ಮಹಿಳೆಯೊಂದಿಗೆ ಸಂಬಂಧವಿದೆ ಎಂಬ ಅನುಮಾನ ದ್ರೌಪದಿಗೆ ಇತ್ತು ಎನ್ನಲಾಗಿದೆ.
ಘಟನೆ ನಡೆದ ರಾತ್ರಿ ಇಬ್ಬರೂ ಊಟ ಮಾಡಿ ಮಲಗಿದ್ದರು. ಮಧ್ಯರಾತ್ರಿ ರಾಜೇಶ್ ಗಾಢ ನಿದ್ದೆಯಲ್ಲಿದ್ದ ವೇಳೆ ದ್ರೌಪದಿ ಕತ್ತಿಯಿಂದ ದಾಳಿ ನಡೆಸಿದ್ದಾಳೆ. ಗಂಭೀರವಾಗಿ ಗಾಯಗೊಂಡ ರಾಜೇಶ್ ಕಿರುಚುತ್ತಾ ಹೊರಗೆ ಓಡಿಬಂದಿದ್ದು, ಅವರ ಮಗ ಮತ್ತು ಸಂಬಂಧಿಕರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಸದ್ಯ ರಾಜೇಶ್ ಅವರನ್ನು ಸ್ಥಳೀಯ ಸಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.



