ದೇವನಹಳ್ಳಿ: ಬೆಂಗಳೂರು ಹೊರವಲಯದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ಟರ್ಮಿನಲ್–1ರಲ್ಲಿ ನಿಂತಿದ್ದ ವಿಮಾನವು ಬೆಂಗಳೂರಿನಿಂದ ಚೆನ್ನೈಗೆ ತೆರಳಬೇಕಾಗಿತ್ತು.
ವಿಮಾನ ಟೇಕ್ಆಫ್ಗೆ ಸಜ್ಜಾಗಿದ್ದ ವೇಳೆ ಏಕಾಏಕಿ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಪೈಲೆಟ್ ಎಚ್ಚೆತ್ತುಕೊಂಡು ರನ್ವೇಯಲ್ಲೇ ವಿಮಾನವನ್ನು ನಿಲ್ಲಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು.
ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬಳಿಕ ಹಿರಿಯ ತಾಂತ್ರಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಿಮಾನದ ತಾಂತ್ರಿಕ ಸ್ಥಿತಿಯನ್ನು ಪರಿಶೀಲಿಸಿದ್ದಾರೆ.



