ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅವರ ರಾಜಕೀಯ ಯಶಸ್ಸಿನ ಬಗ್ಗೆ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ನೀಡಿದ ತಮಾಷೆಯ ಹೇಳಿಕೆ ಇದೀಗ ಭಾರೀ ವೈರಲ್ ಆಗಿದೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿಜಯ್ ಅವರ ರಾಜಕೀಯ ಗೆಲುವನ್ನು ನೋಡಿ ತಮಗೆ “ಸ್ವಲ್ಪ ಅಸೂಯೆ ಆಯಿತು” ಎಂದು ಹೇಳಿದ್ದಾರೆ.
ಪವನ್ ಕಲ್ಯಾಣ್ ತಮ್ಮ ಭಾಷಣದಲ್ಲಿ, ವಿಜಯ್ ಅವರು ತಮಿಳುನಾಡು ಚುನಾವಣೆಯಲ್ಲಿ ಆರಾಮವಾಗಿ ಗೆದ್ದ ರೀತಿಯನ್ನು ಉಲ್ಲೇಖಿಸಿ ಹಾಸ್ಯಭರಿತವಾಗಿ ಪ್ರತಿಕ್ರಿಯಿಸಿದ್ದಾರೆ. ‘ಕಟೌಟ್‌ಗಳು ಮತ್ತು ಹೊಲೊಗ್ರಾಮ್‌ಗಳ ಮೂಲಕವೂ ಗೆದ್ದು ಸಿಎಂ ಆದರು, ಆದರೆ ನಾನು 15 ವರ್ಷ ಹೋರಾಟ ಮಾಡಿದ್ದೇನೆ’ ಎಂದು ಅವರು ಹೇಳಿದ್ದಾರೆ.
ಅದೇ ವೇಳೆ ರಾಜಕೀಯ ಹಾದಿ ಮತ್ತು ರಾಜ್ಯಗಳ ಪರಿಸ್ಥಿತಿಗಳನ್ನು ಹೋಲಿಸುವುದು ಸರಿಯಲ್ಲ ಎಂದು ಪವನ್ ಸ್ಪಷ್ಟಪಡಿಸಿದ್ದಾರೆ. ಆಂಧ್ರ ಮತ್ತು ತಮಿಳುನಾಡು ರಾಜಕೀಯ ಸ್ವಭಾವ ವಿಭಿನ್ನವಾಗಿರುವುದರಿಂದ ಹೋಲಿಕೆ ಅರ್ಥಹೀನ ಎಂದು ಹೇಳಿದ್ದಾರೆ.
ಅವರ ಈ ಹೇಳಿಕೆ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಕಾರಣವಾಗಿದ್ದು, ಅಭಿಮಾನಿಗಳು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.



