ಬೆಂಗಳೂರು: ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿದ್ದ ಶಂಕಿತ ಎಬೋಲಾ ವೈರಸ್ ಪ್ರಕರಣದ ಲ್ಯಾಬ್ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್ಗೆ ಸಂಬಂಧಿಸಿದ ಕೆಲವು ರೋಗಲಕ್ಷಣಗಳು ಕಂಡುಬಂದ ಹಿನ್ನೆಲೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿತ್ತು.
ಮಹಿಳೆಯನ್ನು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಕ್ವಾರಂಟೈನ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಜೊತೆಗೆ ಅವರ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿತ್ತು.
ಇದೀಗ ಲ್ಯಾಬ್ ವರದಿ ನೆಗೆಟಿವ್ ಬಂದಿದ್ದು, ಮಹಿಳೆಗೆ ಎಬೋಲಾ ಸೋಂಕು ತಗುಲಿಲ್ಲ ಎಂಬುದನ್ನು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಬೆಳವಣಿಗೆಯಿಂದ ರಾಜ್ಯದ ಜನರಲ್ಲಿ ಮೂಡಿದ್ದ ಆತಂಕ ಕಡಿಮೆಯಾಗಿದ್ದು, ಆರೋಗ್ಯ ಇಲಾಖೆ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದೆ.



