HomeEntertainment‘ದೇವಿ‌ ಮಹಾತ್ಮೆ’ ಸಿನಿಮಾದ ಆಡಿಯೋ ರೈಟ್ಸ್ ಖರೀದಿಸಿದ ‘ಹೊಂಬಾಳೆ ಮ್ಯೂಸಿಕ್’: ಚಿತ್ರರಂಗದಲ್ಲಿ ಹೊಸ ಅಧ್ಯಾಯ ಆರಂಭ!

‘ದೇವಿ‌ ಮಹಾತ್ಮೆ’ ಸಿನಿಮಾದ ಆಡಿಯೋ ರೈಟ್ಸ್ ಖರೀದಿಸಿದ ‘ಹೊಂಬಾಳೆ ಮ್ಯೂಸಿಕ್’: ಚಿತ್ರರಂಗದಲ್ಲಿ ಹೊಸ ಅಧ್ಯಾಯ ಆರಂಭ!

For Dai;y Updates Join Our whatsapp Group

ಭಾರತೀಯ ಚಿತ್ರರಂಗದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾದ ‘ಹೊಂಬಾಳೆ ಫಿಲ್ಮ್ಸ್’ ಈಗ ಮ್ಯೂಸಿಕ್ ಕ್ಷೇತ್ರಕ್ಕೂ ಅಧಿಕೃತವಾಗಿ ಕಾಲಿಟ್ಟಿದೆ. ‘ಹೊಂಬಾಳೆ ಮ್ಯೂಸಿಕ್’ ಮೂಲಕ ಸಿನಿಮಾಗಳ ಆಡಿಯೋ ಹಕ್ಕುಗಳನ್ನು ಖರೀದಿಸುವ ಕಾರ್ಯ ಆರಂಭಿಸಿರುವ ಸಂಸ್ಥೆ, ತನ್ನ ಮೊದಲ ಖರೀದಿಯಾಗಿ ‘ದೇವಿ ಮಹಾತ್ಮೆ’ ಸಿನಿಮಾದ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿದೆ.

‘ಕೆಜಿಎಫ್’, ‘ಕಾಂತಾರ’, ‘ಸಲಾರ್’ ಸೇರಿದಂತೆ ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ಹೊಂಬಾಳೆ, ಈಗ ಸಂಗೀತ ಮಾರುಕಟ್ಟೆಯಲ್ಲೂ ತನ್ನ ಹಾಜರಾತಿಯನ್ನು ಗಟ್ಟಿಗೊಳಿಸುತ್ತಿದೆ. ‘ದೇವಿ ಮಹಾತ್ಮೆ’ ಚಿತ್ರದ ಆಡಿಯೋ ಹಕ್ಕು ಹೊಂಬಾಳೆ ಮ್ಯೂಸಿಕ್‌ಗೆ ಸೇರುವುದರಿಂದ ಚಿತ್ರತಂಡಕ್ಕೆ ದೊಡ್ಡ ಮಟ್ಟದ ಬಲ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ನಾಗರಾಜ ಸೋಮಯಾಜಿ ನಿರ್ದೇಶನದ ಈ ಚಿತ್ರವು ಕಾಮಿಡಿ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಲಿಖಿತ್ ಪ್ರಸಾದ್ ಕೆ. ಶೆಟ್ಟಿ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಯುವಿಜಿ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ವಿದ್ಯಾ ಗಾಂಧಿರಾಜನ್ ಅವರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಚಿತ್ರದ ತಾಂತ್ರಿಕ ವಿಭಾಗದಲ್ಲೂ ಬಲವಾದ ತಂಡ ಕೆಲಸ ಮಾಡುತ್ತಿದ್ದು, ಉಜ್ವಲ್ ಚಂದ್ರ ಅವರ ಸಂಕಲನ ಮತ್ತು ಎಸ್.ಕೆ. ರಾವ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಬರವಣಿಗೆಯಲ್ಲಿ ಅರವಿಂದ್ ಕುಪ್ಳೀಕರ್ ಸೇರಿದಂತೆ ಹಲವು ಲೇಖಕರು ಕೈಜೋಡಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img