HomeVijayanagarಇಂಧನ ದರ ಏರಿಕೆ, ವಿದ್ಯಾರ್ಥಿಗಳ ಸಂಕಷ್ಟಕ್ಕೆ ಮೋದಿ ಸರ್ಕಾರವೇ ಕಾರಣ: ಹುಡೇದ್ ಗುರು ಬಸವರಾಜ್

ಇಂಧನ ದರ ಏರಿಕೆ, ವಿದ್ಯಾರ್ಥಿಗಳ ಸಂಕಷ್ಟಕ್ಕೆ ಮೋದಿ ಸರ್ಕಾರವೇ ಕಾರಣ: ಹುಡೇದ್ ಗುರು ಬಸವರಾಜ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪೆಟ್ರೋಲ್-ಡೀಸೆಲ್ ದರ ಏರಿಕೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಜನಸಾಮಾನ್ಯರ ಸಂಕಷ್ಟದ ವಿಚಾರವಾಗಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ವಕ್ತಾರ ಹುಡೇದ್ ಗುರು ಬಸವರಾಜ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ವರದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಕಳೆದ ಕೆಲ ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿ ಜನರ ಮೇಲಿನ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಿಸಿದೆ ಎಂದು ಆರೋಪಿಸಿದರು.
“ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಇಂಧನ ದರ ಏರಿಕೆ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಬದುಕಿಗೆ ದೊಡ್ಡ ಹೊಡೆತವಾಗಿದೆ,” ಎಂದು ಹೇಳಿದರು.
ದೇಶದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಹತ್ವದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕುಗ್ಗಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರಕರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೆಲ ಯುವಕರು ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ದೇಶದ ಮನಸ್ಸನ್ನು ನೋಯಿಸುವಂತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಒಂದೆಡೆ ದೇಶದಲ್ಲಿ ನಿರುದ್ಯೋಗ, ಬೆಲೆ ಏರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯ ಅವ್ಯವಸ್ಥೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದರೆ, ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸಗಳಲ್ಲಿ ತೊಡಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಟೀಕಿಸಿದರು.
“ದೇಶಕ್ಕಾಗಿ ತ್ಯಾಗ ಮಾಡಬೇಕು ಎಂದು ಜನರಿಗೆ ಕರೆ ನೀಡುವ ಸರ್ಕಾರ ಮೊದಲು ಜನರ ನೋವು ಮತ್ತು ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು,” ಎಂದು ಹೇಳಿದರು.
ಪೆಟ್ರೋಲ್, ಡೀಸೆಲ್ ಹಾಗೂ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಸಣ್ಣ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ತಕ್ಷಣ ಇಂಧನ ದರ ಏರಿಕೆಯನ್ನು ಹಿಂಪಡೆದು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಪಾರದರ್ಶಕ ತನಿಖೆ ನಡೆಸಬೇಕು. ಜೊತೆಗೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
“ಬೆಲೆ ಏರಿಕೆ ಮತ್ತು ಶಿಕ್ಷಣ ಹಗರಣಗಳಿಂದ ಜನರು ಕಂಗೆಟ್ಟಿದ್ದಾರೆ; ಕೇಂದ್ರ ಸರ್ಕಾರ ಜನರ ಧ್ವನಿಗೆ ಸ್ಪಂದಿಸಬೇಕು.”
ಹುಡೇದ್ ಗುರು ಬಸವರಾಜ್

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!