HomeBengaluru Newsಬಕ್ರೀದ್ ಹಬ್ಬ! ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ, ಸಂಪೂರ್ಣ ಮಾಹಿತಿ ಇಲ್ಲಿದೆ

ಬಕ್ರೀದ್ ಹಬ್ಬ! ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ, ಸಂಪೂರ್ಣ ಮಾಹಿತಿ ಇಲ್ಲಿದೆ

For Dai;y Updates Join Our whatsapp Group

Spread the love

ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಮತ್ತು ಮಾರ್ಗ ಬದಲಾವಣೆಗಳನ್ನು ಜಾರಿಗೊಳಿಸಲಾಗಿದೆ ಎಂದು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ.

ಬೆಂಗಳೂರಿನ ದಕ್ಷಿಣ ವಿಭಾಗದ ಸಂಚಾರ ಪೊಲೀಸ್ ಉಪ ಆಯುಕ್ತರು ತಮ್ಮ ಅಧಿಕೃತ X ಖಾತೆಯಲ್ಲಿ ಈ ಕುರಿತು ಸಂಚಾರ ಸಲಹೆ ಪ್ರಕಟಿಸಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಿದ್ದಾರೆ.

ಮೈಕೋಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬನ್ನೇರುಘಟ್ಟ ಮುಖ್ಯ ರಸ್ತೆಯ ಸಾಗರ್ ಆಸ್ಪತ್ರೆ ಜಂಕ್ಷನ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್‌ವರೆಗೆ ಹಾಗೂ ಸಾಯಿರಾಂ ಜಂಕ್ಷನ್‌ನಿಂದ ಗುರಪ್ಪನಪಾಳ್ಯವರೆಗೆ ಸಂಚಾರ ನಿರ್ಬಂಧ ವಿಧಿಸಲಾಗಿದೆ. 39ನೇ ಕ್ರಾಸ್ ರಸ್ತೆಯಲ್ಲಿಯೂ ಗುರಪ್ಪನಪಾಳ್ಯದಿಂದ ರೆಡ್ಡಿ ಆಸ್ಪತ್ರೆ ಜಂಕ್ಷನ್‌ವರೆಗೆ ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ.

ಈ ಭಾಗದಲ್ಲಿ ವಾಹನ ಸವಾರರಿಗೆ ಡೈರಿ ಸರ್ಕಲ್, ತಿಲಕ ನಗರ, ಈಸ್ಟ್ ಎಂಡ್ ರಸ್ತೆ, ಜಯದೇವ ಜಂಕ್ಷನ್ ಸೇರಿದಂತೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಇದೇ ರೀತಿ ಕೆ.ಎಸ್. ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಕನಕಪುರ ಮುಖ್ಯ ರಸ್ತೆಯ ಸಾರಕ್ಕಿ ಸಿಗ್ನಲ್‌ನಿಂದ ಔಟರ್ ರಿಂಗ್ ರಸ್ತೆಯ ಕೆ.ಎಸ್. ಲೇಔಟ್ ಸಿಗ್ನಲ್ ವರೆಗೆ ಸಂಚಾರ ನಿರ್ಬಂಧ ವಿಧಿಸಲಾಗಿದೆ.

ಈ ಮಾರ್ಗದಲ್ಲಿ ಬರುವ ವಾಹನಗಳು ಬನಶಂಕರಿ, ಸಾರಕ್ಕಿ ಮಾರ್ಕೆಟ್, ಬೇಂದ್ರೆ ಸರ್ಕಲ್ ಮೂಲಕ ಪರ್ಯಾಯವಾಗಿ ಸಂಚರಿಸಬಹುದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಬ್ಬದ ಹಿನ್ನೆಲೆಯಲ್ಲಿ ಭಾರಿ ಜನಸಂದಣಿ ನಿರೀಕ್ಷೆಯಿರುವುದರಿಂದ ಸಾರ್ವಜನಿಕರು ಸಹಕರಿಸಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!