ಚಿಕ್ಕಮಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಅಹಿಂದ ಮುಖಂಡ ಪುಟ್ಟೇಗೌಡ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
“ರಾತ್ರೋರಾತ್ರಿ ಸಿಎಂ ಬದಲಿಸುವ ಕಾಂಗ್ರೆಸ್ ನಿರ್ಧಾರವನ್ನು ನಾವು ವಿರೋಧಿಸುತ್ತೇವೆ. ಇಂತಹ ನಿರ್ಧಾರಗಳಿಂದ ಪಕ್ಷಕ್ಕೆ ಯಾವ ಪರಿಣಾಮ ಎದುರಾಗುತ್ತದೆ ಅನ್ನೋದು ಕಾಂಗ್ರೆಸ್‌ಗೆ ಚೆನ್ನಾಗಿ ಗೊತ್ತಿದೆ” ಎಂದು ಅವರು ಹೇಳಿದರು.
ಸಿದ್ದರಾಮಯ್ಯ ಅವರಿಗೆ ಇನ್ನೂ ಎರಡು ವರ್ಷಗಳ ಕಾಲ ಅಧಿಕಾರ ಮುಂದುವರಿಸಲು ಅವಕಾಶ ನೀಡಬೇಕು. ಅವರು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡಬೇಕು. ಇಲ್ಲವಾದರೆ ಕಾಂಗ್ರೆಸ್ ಕೈಗೊಂಡಿರುವ ಈ ರಾಜಕೀಯ ಹೆಜ್ಜೆ ಪಕ್ಷಕ್ಕೇ ದೊಡ್ಡ ಹಿನ್ನಡೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಈ ಹಿಂದೆ ದೇವರಾಜ ಅರಸು, ಬಂಗಾರಪ್ಪ ಮತ್ತು ವೀರಪ್ಪ ಮೊಯ್ಲಿ ಅವರನ್ನು ಅಧಿಕಾರದಿಂದ ತೆಗೆದ ಬಳಿಕ ಕಾಂಗ್ರೆಸ್ ದುರ್ಬಲಗೊಂಡಿತ್ತು. ಆ ಇತಿಹಾಸವನ್ನು ಪಕ್ಷ ಮರೆತಿರಬಾರದು ಎಂದು ಪುಟ್ಟೇಗೌಡ ಹೇಳಿದರು.
“ಅಹಿಂದ ಸಮುದಾಯದ ಬೆಂಬಲ ಕಾಂಗ್ರೆಸ್‌ಗೆ ಎಷ್ಟು ಮುಖ್ಯ ಅನ್ನೋದು ಅವರಿಗೆ ಗೊತ್ತಿದೆ. ಹೀಗಾಗಿ ಸಿದ್ದರಾಮಯ್ಯ ಅವರನ್ನು ಗೌರವಪೂರ್ವಕವಾಗಿ ನಡೆಸಿಕೊಳ್ಳಬೇಕು” ಎಂದು ಆಗ್ರಹಿಸಿದರು.



