HomeGadag Newsಬೀಜೋಪಚಾರದಿಂದಲೇ ಉತ್ತಮ ಇಳುವರಿ ಸಾಧ್ಯ: ಐ.ಎಸ್. ಪಾಟೀಲ

ಬೀಜೋಪಚಾರದಿಂದಲೇ ಉತ್ತಮ ಇಳುವರಿ ಸಾಧ್ಯ: ಐ.ಎಸ್. ಪಾಟೀಲ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ರೋಣ: ಬಿತ್ತನೆ ಸಂದರ್ಭದಲ್ಲಿನ ಬೀಜೋಪಚಾರವನ್ನು ರೈತರು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಬೀಜೋಪಚಾರ ಮಾಡಿದರೆ ಬೆಳೆಗಳಿಗೆ ರೋಗ ಬಾಧೆ ಕಡಿಮೆಯಾಗುವುದರ ಜೊತೆಗೆ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗುತ್ತದೆ ಎಂದು ಧಾರವಾಡ ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಐ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಬಸ್ ನಿಲ್ದಾಣದ ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ರಿಯಾಯಿತಿ ದರದ ಮುಂಗಾರು ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಬಾರಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿರುವುದರಿಂದ ರೈತರಲ್ಲಿ ಹರ್ಷ ಮೂಡಿದೆ. ರೈತರು ಜಮೀನುಗಳನ್ನು ಹದಗೊಳಿಸಿ ರೋಹಿಣಿ ಮಳೆಯ ನಿರೀಕ್ಷೆಯಲ್ಲಿದ್ದು, ಕೃಷಿ ಇಲಾಖೆ ಸಹ ಬೀಜ ವಿತರಣೆಗೆ ಸಜ್ಜಾಗಿದೆ ಎಂದು ಹೇಳಿದರು.
ಸಾವಯವ ಗೊಬ್ಬರ ಬಳಕೆಗೆ ರೈತರು ಹೆಚ್ಚು ಒತ್ತು ನೀಡಬೇಕು. ಸಾವಯವ ಗೊಬ್ಬರದಿಂದ ಜಮೀನು ಫಲವತ್ತತೆ ಹೆಚ್ಚುವುದರ ಜೊತೆಗೆ ಉತ್ತಮ ಗುಣಮಟ್ಟದ ಬೆಳೆ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಜೊತೆಗೆ ಬಿತ್ತನೆ ಬೀಜಗಳ ಕೊರತೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಕೃಷಿ ಇಲಾಖೆಯ ಉಪನಿರ್ದೇಶಕ ಬಿ.ಆರ್. ಪಾಲಾಕ್ಷಗೌಡ ಮಾತನಾಡಿ, ತಾಲೂಕಿನಲ್ಲಿ ಸುಮಾರು 35 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರು ಬೆಳೆ ಬಿತ್ತನೆಯಾಗುವ ನಿರೀಕ್ಷೆ ಇದೆ ಎಂದರು. ಈ ಹಿನ್ನೆಲೆಯಲ್ಲಿ ಬೀಜ ಹಾಗೂ ರಸಗೊಬ್ಬರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಈ ಬಾರಿ ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು, ಜಮೀನುಗಳ ತಂಪು ಕಾಪಾಡಲು ಸಹಕಾರಿಯಾಗಿದೆ. ರೈತರು ಗದ್ದಲ ಸೃಷ್ಟಿಸದೇ ಸಮರ್ಪಕವಾಗಿ ಬೀಜಗಳನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಯಚ್ಚರಗೌಡ ಗೋವಿಂದಗೌಡ್ರ, ಬಸವರಾಜ ನವಲಗುಂದ, ಶಿವಪ್ಪ ಅರಹುಣಸಿ, ಸಂಜಯ ದೊಡ್ಡಮನಿ, ಎಸ್.ಎಫ್. ತಹಶೀಲ್ದಾರ ಸೇರಿದಂತೆ ರೈತರು ಹಾಗೂ ಕೃಷಿ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು. ಇದೇ ವೇಳೆ ಐ.ಎಸ್. ಪಾಟೀಲರು ರೈತರಿಗೆ ಸಾಂಕೇತಿಕವಾಗಿ ಬಿತ್ತನೆ ಬೀಜ ವಿತರಿಸಿದರು.
“ಬೀಜೋಪಚಾರ ಮಾಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಾವಯವ ಗೊಬ್ಬರ ಬಳಕೆ ಮಾಡಿದರೆ ಜಮೀನು ಫಲವತ್ತತೆ ಉಳಿಯುತ್ತದೆ. ರೈತರು ವೈಜ್ಞಾನಿಕ ಕೃಷಿ ಪದ್ಧತಿಗಳತ್ತ ಗಮನ ಹರಿಸಬೇಕು”
ಐ.ಎಸ್. ಪಾಟೀಲ
ಮಾಧ್ಯಮಗಳಿಗೆ ಮಾಹಿತಿ ಇಲ್ಲದೆ ಬೀಜ ವಿತರಣೆ!
ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮ ರೈತರಿಗೆ ನೇರವಾಗಿ ಸಂಬಂಧಿಸಿದ ಮಹತ್ವದ ಕಾರ್ಯಕ್ರಮವಾಗಿದ್ದರೂ, ಅದರ ಬಗ್ಗೆ ಮಾಧ್ಯಮಗಳಿಗೆ ಪೂರ್ವ ಮಾಹಿತಿ ನೀಡದೇ ಕಾರ್ಯಕ್ರಮ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ.
ರೋಣ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವೇ ರೈತರ ಸಮ್ಮುಖದಲ್ಲಿ ಬೀಜ ವಿತರಣೆಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕ ಮಾಹಿತಿ ಹಂಚಿಕೆಯಲ್ಲಿ ಕೃಷಿ ಇಲಾಖೆ ನಿರ್ಲಕ್ಷ್ಯ ತೋರಿದೆಯೇ ಎಂಬ ಪ್ರಶ್ನೆಗಳು ಕೇಳಿ ಬರುತ್ತಿವೆ. ವಿಷಯ ಕುರಿತು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಎಫ್. ತಹಶೀಲ್ದಾರರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಕರೆ ಸ್ವೀಕರಿಸಲಿಲ್ಲ.

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!