ದಕ್ಷಿಣ ಭಾರತ ಮತ್ತು ಬಾಲಿವುಡ್‌ನಲ್ಲಿ ಹಲವು ವರ್ಷಗಳ ಕಾಲ ಯಶಸ್ಸಿನ ಪರ್ಯಾಯವಾಗಿದ್ದ ನಟಿ ಪೂಜಾ ಹೆಗ್ಡೆ ಇದೀಗ ಸತತ ಸೋಲುಗಳಿಂದ ಸಂಕಷ್ಟದ ಹಾದಿಯಲ್ಲಿ ಸಾಗುತ್ತಿದ್ದಾರೆ. ದೊಡ್ಡ ಸ್ಟಾರ್‌ಗಳ ಜೊತೆ ನಟಿಸಿದ್ದರೂ, ಇತ್ತೀಚಿನ ವರ್ಷಗಳಲ್ಲಿ ಅವರ ಬಹುತೇಕ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ವಿಫಲವಾಗಿವೆ.
‘ರಾಧೆ ಶ್ಯಾಮ್’, ‘ಆಚಾರ್ಯ’, ‘ಬೀಸ್ಟ್’, ‘ಸರ್ಕಸ್’, ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’, ‘ದೇವ’ ಹಾಗೂ ‘ರೆಟ್ರೋ’ ಸೇರಿದಂತೆ ಹಲವು ನಿರೀಕ್ಷಿತ ಸಿನಿಮಾಗಳು ಪ್ರೇಕ್ಷಕರ ಮನ ಗೆಲ್ಲುವಲ್ಲಿ ವಿಫಲವಾಗಿವೆ. ಪರಿಣಾಮ, ಒಮ್ಮೆ ನಿರ್ಮಾಪಕರ ಮೊದಲ ಆಯ್ಕೆಯಾಗಿದ್ದ ಪೂಜಾ ಹೆಗ್ಡೆ ಈಗ ಮತ್ತೊಂದು ದೊಡ್ಡ ಗೆಲುವಿಗಾಗಿ ಕಾಯುವಂತಾಗಿದೆ.
ಈ ಸಂದರ್ಭದಲ್ಲಿ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾ ನಟಿಯ ಪಾಲಿಗೆ ಟರ್ನಿಂಗ್ ಪಾಯಿಂಟ್ ಆಗುವ ನಿರೀಕ್ಷೆ ಮೂಡಿಸಿದೆ. ಡೇವಿಡ್ ಧವನ್ ನಿರ್ದೇಶನದ ಈ ಚಿತ್ರದಲ್ಲಿ ವರುಣ್ ಧವನ್ ಜೊತೆಗೆ ಪೂಜಾ ಹೆಗ್ಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಜೂನ್ 5ರಂದು ತೆರೆಗೆ ಬರಲಿರುವ ಈ ಸಿನಿಮಾ ಯಶಸ್ವಿಯಾದರೆ, ಪೂಜಾ ಹೆಗ್ಡೆ ಅವರ ವೃತ್ತಿಜೀವನಕ್ಕೆ ಹೊಸ ಚೈತನ್ಯ ಸಿಗಬಹುದು. ಇಲ್ಲವಾದರೆ, ಸತತ ಸೋಲಿನ ಒತ್ತಡ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸದ್ಯ ಬಾಲಿವುಡ್‌ನಲ್ಲಿ ಎಲ್ಲರ ಕಣ್ಣು ಈ ಚಿತ್ರದ ಫಲಿತಾಂಶದ ಮೇಲೆಯೇ ನೆಟ್ಟಿದೆ.



