ಬೀದರ್: ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ನಡೆದಿರುವ ಘೋರ ಘಟನೆ ರಾಜ್ಯದಲ್ಲಿ ಭಾರೀ ಆಘಾತ ಮೂಡಿಸಿದೆ. ಬ್ರಿಮ್ಸ್ ಆಸ್ಪತ್ರೆಯ ಅಟೆಂಡರ್ ಒಬ್ಬನು ಮಹಿಳಾ ಶವಗಳ ಬೆತ್ತಲೆ ಫೋಟೋಗಳನ್ನು ಮೊಬೈಲ್‌ನಲ್ಲಿ ತೆಗೆದುಕೊಂಡು ಸಂಗ್ರಹಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಮಾಹಿತಿಯ ಪ್ರಕಾರ, ಶವಾಗಾರದಲ್ಲಿ ಅನುಮತಿ ಇಲ್ಲದೇ ಶವಗಳ ಬಟ್ಟೆ ತೆಗೆದು ಫೋಟೋ ತೆಗೆದಿರುವುದು ವೈದ್ಯಕೀಯ ಗೌಪ್ಯತೆ ಮತ್ತು ಮಾನವೀಯತೆಯ ಗಂಭೀರ ಉಲ್ಲಂಘನೆಯಾಗಿದೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸಾರ್ವಜನಿಕರಿಂದ ತೀವ್ರ ಖಂಡನೆ ವ್ಯಕ್ತವಾಗಿದೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆಗೆ ವರದಿ ನೀಡುವಂತೆ ಸೂಚಿಸಿದೆ ಮತ್ತು ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿದೆ.
ಆರೋಪಿ ಮುನೀರ್ ಅಹಮದ್ ವಿರುದ್ಧ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



