HomeBengaluru Cityಅಧಿಕೃತವಾಗಿ ಡಿಕೆಶಿಗೆ ಸಿಎಂ ಪಟ್ಟ! ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸರ್ವಾನುಮತ ಆಯ್ಕೆ

ಅಧಿಕೃತವಾಗಿ ಡಿಕೆಶಿಗೆ ಸಿಎಂ ಪಟ್ಟ! ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸರ್ವಾನುಮತ ಆಯ್ಕೆ

For Dai;y Updates Join Our whatsapp Group

Spread the love

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗುವುದು ಬಹುತೇಕ ಖಚಿತವಾಗಿತ್ತು. ಆದರೆ ಪಕ್ಷದ ಸಂಪ್ರದಾಯ ಮತ್ತು ಪ್ರಕ್ರಿಯೆಯಂತೆ ಶಾಸಕಾಂಗ ಪಕ್ಷದ ಸಭೆ ನಡೆಸಿ ಅಧಿಕೃತವಾಗಿ ನಾಯಕನ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರು ಹಾಗೂ ವೀಕ್ಷಕರಾದ ಜೈರಾಮ್ ರಮೇಶ್, ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉಪಸ್ಥಿತರಿದ್ದರು. ಸಭೆಗೆ ಮುನ್ನ ವಿಧಾನಸೌಧದಲ್ಲಿರುವ ಅಜ್ಜಯ್ಯನ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್, ಬಳಿಕ ಸಭಾಂಗಣಕ್ಕೆ ಆಗಮಿಸಿ ಎಲ್ಲ ಶಾಸಕರ ಬಳಿಗೆ ತೆರಳಿ ಹಸ್ತಲಾಘವ ಮಾಡಿ ಅಭಿನಂದನೆ ಸ್ವೀಕರಿಸಿದರು.

ಮೂರು ವರ್ಷಗಳ ಕಾಲ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಗೂ ಪ್ರಮುಖ ಕೊಡುಗೆ ನೀಡಿದ್ದಾರೆ.

ಜೂನ್ 3ರಂದು ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!