ನೆಲಮಂಗಲ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ.
ಮಳೆಯ ಪರಿಣಾಮ ಕಾಂಪೌಂಡ್ ಗೋಡೆ ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಮೃತರನ್ನು ದ್ಯಾಮಪ್ಪ ಮತ್ತು ಬಾಬುಲಾಲ್ ಎಂದು ಗುರುತಿಸಲಾಗಿದೆ.
ಘಟನೆಯು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ. ನಿರಂತರ ಮಳೆಯಿಂದಾಗಿ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.



