ನವದೆಹಲಿ: ದೆಹಲಿಯ ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದ್ದು, ವಿಕಾಸ್ ಮಾರ್ಗದಲ್ಲಿರುವ ಸಚಿವಾಲಯದ ಕಟ್ಟಡದ ಎರಡನೇ ಮಹಡಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕನಿಷ್ಠ ಎಂಟು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.
ಸದ್ಯ ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿರುವ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ನಿಕಟವಾಗಿ ಪರಿಶೀಲಿಸುತ್ತಿದ್ದು, ಬೆಂಕಿಯಿಂದ ಉಂಟಾದ ಹಾನಿಯ ಪ್ರಮಾಣ ಹಾಗೂ ಅವಘಡದ ಕಾರಣ ಕುರಿತು ತನಿಖೆ ಮುಂದುವರಿದಿದೆ.



