HomePolitics Newsಕಾಂಗ್ರೆಸ್ʼನಲ್ಲಿ ಡ್ರೈವರ್ ಮಾತ್ರ ಬದಲಾಗಿದೆ, ಬಸ್ ಕೆಟ್ಟದ್ದೇ ಇದೆ; ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಅಶೋಕ್ ಟಾಂಗ್

ಕಾಂಗ್ರೆಸ್ʼನಲ್ಲಿ ಡ್ರೈವರ್ ಮಾತ್ರ ಬದಲಾಗಿದೆ, ಬಸ್ ಕೆಟ್ಟದ್ದೇ ಇದೆ; ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಅಶೋಕ್ ಟಾಂಗ್

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಡೆದಿದ್ದರೂ ಕಾಂಗ್ರೆಸ್ ಸರ್ಕಾರದ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಆಗಿರುವುದನ್ನು ವ್ಯಂಗ್ಯವಾಗಿ ಉಲ್ಲೇಖಿಸಿದ ಅವರು, ಡ್ರೈವರ್ ಮಾತ್ರ ಬದಲಾಗಿದ್ದಾರೆ, ಬಸ್ ಮತ್ತು ಎಂಜಿನ್ ಕೆಟ್ಟು ಹೋಗಿವೆ ಎಂದು ಲೇವಡಿ ಮಾಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರದ ನಾಯಕತ್ವ ಬದಲಾದರೆ ಮಾತ್ರ ಆಡಳಿತ ಸುಧಾರಿಸುವುದಿಲ್ಲ. ಈಗಾಗಲೇ ಆರ್ಥಿಕ ಹಾಗೂ ಆಡಳಿತಾತ್ಮಕವಾಗಿ ಹದಗೆಟ್ಟಿರುವ ವ್ಯವಸ್ಥೆಯನ್ನು ಹೊಸ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಆರೋಪಿಸಿದರು.

ಡ್ರೈವರ್ ಬದಲಾದರೆ ಸಾಕಾಗುವುದಿಲ್ಲ. ಬಸ್ ಮತ್ತು ಎಂಜಿನ್ ಎರಡೂ ಕೆಟ್ಟು ಹೋಗಿದ್ದರೆ ಅದು ಸರಿಯಾಗಿ ಓಡುವುದಿಲ್ಲ. ಸಿದ್ದರಾಮಯ್ಯ ಅವರು ಕೆಟ್ಟುಹೋಗಿರುವ ಗಾಡಿಯನ್ನೇ ಡಿ.ಕೆ. ಶಿವಕುಮಾರ್ ಅವರಿಗೆ ನೀಡಿದ್ದಾರೆ. ಸಾಲ ಮಾಡಿ ಡೀಸೆಲ್ ಹಾಕಿಸಿಕೊಂಡು ಸಾಗುತ್ತಿರುವ ಬಸ್ ಅನ್ನು ಹೊಸ ಚಾಲಕನಿಗೆ ಒಪ್ಪಿಸಿದ್ದಾರೆ,” ಎಂದು ಅಶೋಕ್ ವ್ಯಂಗ್ಯವಾಡಿದರು.

ಇದೇ ವೇಳೆ, ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಾಯಿಸಿರುವ ವಿಚಾರವನ್ನು ಉಲ್ಲೇಖಿಸಿದ ಅವರು, ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗಗಳ ನಾಯಕರನ್ನು ಕಡೆಗಣಿಸುವ ಪರಂಪರೆಯನ್ನು ಮುಂದುವರಿಸಿದೆ ಎಂದು ಆರೋಪಿಸಿದರು.

“ನಾನು ಅಹಿಂದ ನಾಯಕ, ದೇಶದಲ್ಲೇ ಏಕೈಕ ಅಹಿಂದ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು. ಯಾವುದೇ ಕಾರಣಕ್ಕೂ ನನ್ನನ್ನು ಬದಲಾಯಿಸುವುದಿಲ್ಲ ಎಂಬ ವಿಶ್ವಾಸ ಅವರಲ್ಲಿತ್ತು. ಆದರೆ ರಾಹುಲ್ ಗಾಂಧಿ ಅವರ ನಿರ್ಧಾರದಿಂದಲೇ ಅವರು ಸ್ಥಾನ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ಉಲ್ಲೇಖಿಸಿದ ಅಶೋಕ್, ಹಿಂದೆ ರಾಜೀವ್ ಗಾಂಧಿ ಅವರು ವೀರೇಂದ್ರ ಪಾಟೀಲರನ್ನು ಅಧಿಕಾರದಿಂದ ಕೆಳಗಿಳಿಸಿದ್ದರು. ಇಂದಿರಾ ಗಾಂಧಿ ಅವರು ದೇವರಾಜ ಅರಸ್ ಹಾಗೂ ಬಂಗಾರಪ್ಪ ಅವರನ್ನು ಪದಚ್ಯುತಗೊಳಿಸಿದ್ದರು. ಇದೀಗ ಸಿದ್ದರಾಮಯ್ಯ ಅವರ ಸರದಿ ಬಂದಿದೆ. ಕಾಂಗ್ರೆಸ್ ಪಕ್ಷದಲ್ಲಿ ನಾಯಕರನ್ನು ಅಧಿಕಾರದಿಂದ ಕಿತ್ತೊಗೆಯುವ ಸಂಸ್ಕೃತಿ ಹೊಸದೇನಲ್ಲ ಎಂದು ಟೀಕಿಸಿದರು.

ದೇವರಾಜ ಅರಸ್, ಬಂಗಾರಪ್ಪ ಹಾಗೂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಾಯಕರಾಗಿದ್ದರು. ಇಂತಹ ನಾಯಕರನ್ನೇ ಕಾಂಗ್ರೆಸ್ ಪಕ್ಷ ಪದೇಪದೇ ಕಡೆಗಣಿಸುತ್ತಿದೆ. ಹೀಗಾಗಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪರವಲ್ಲ, ಅವರ ವಿರುದ್ಧದ ಪಕ್ಷವಾಗಿ ಪರಿಣಮಿಸಿದೆ ಎಂದು ಅಶೋಕ್ ಆರೋಪಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!