HomeKarnataka Newsರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಗಳಿಗೆ ನಾಮಪತ್ರ ಸಲ್ಲಿಕೆ ಆರಂಭ: ಅಭ್ಯರ್ಥಿಗಳ ಆಯ್ಕೆ ಕಸರತ್ತಿನಲ್ಲಿ ಕಾಂಗ್ರೆಸ್-ಬಿಜೆಪಿ

ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಗಳಿಗೆ ನಾಮಪತ್ರ ಸಲ್ಲಿಕೆ ಆರಂಭ: ಅಭ್ಯರ್ಥಿಗಳ ಆಯ್ಕೆ ಕಸರತ್ತಿನಲ್ಲಿ ಕಾಂಗ್ರೆಸ್-ಬಿಜೆಪಿ

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ನಾಲ್ಕು ರಾಜ್ಯಸಭೆ ಹಾಗೂ ಏಳು ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಈ ಸಂಬಂಧ ಚುನಾವಣಾ ಆಯೋಗ ಎರಡೂ ಚುನಾವಣೆಗಳ ಅಧಿಸೂಚನೆಯನ್ನು ಪ್ರಕಟಿಸಿದೆ.

ಜೂನ್ 8ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂನ್ 11ರಂದು ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ಜೂನ್ 18ರಂದು ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯದ ರಾಜಕೀಯ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಇನ್ನೂ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿಲ್ಲ. ಮುಖ್ಯಮಂತ್ರಿ ಆಯ್ಕೆ ಮತ್ತು ಸಚಿವ ಸಂಪುಟ ರಚನೆಯ ಪ್ರಕ್ರಿಯೆಯಲ್ಲಿ ನಿರತರಾಗಿರುವ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆ ವಿಳಂಬವಾಗಿರುವುದು ಗಮನಾರ್ಹವಾಗಿದೆ. ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಎರಡೂ ಪಕ್ಷಗಳು ತಮ್ಮ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ.

ಸಂಖ್ಯಾಬಲದ ಲೆಕ್ಕಾಚಾರದ ಪ್ರಕಾರ, ರಾಜ್ಯಸಭೆಯ ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್ ಮೂರು ಸ್ಥಾನಗಳನ್ನು ಹಾಗೂ ಬಿಜೆಪಿ ಒಂದು ಸ್ಥಾನವನ್ನು ಗೆಲ್ಲುವ ಸಾಧ್ಯತೆ ಇದೆ. ಇದೇ ವೇಳೆ ವಿಧಾನ ಪರಿಷತ್ತಿನ ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನಗಳಲ್ಲಿ ಸುಲಭ ಜಯದ ನಿರೀಕ್ಷೆಯಲ್ಲಿದ್ದು, ಹೆಚ್ಚುವರಿ ಒಂದು ಸ್ಥಾನವನ್ನು ಗೆಲ್ಲುವ ಉದ್ದೇಶದಿಂದ ಮತ್ತೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚಿಂತನೆ ನಡೆಸುತ್ತಿದೆ. ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ.

ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ನಾಯಕ ಈರಣ್ಣ ಕಡಾಡಿ ಹಾಗೂ ಕೆ. ನಾರಾಯಣ ಅವರ ಅವಧಿ ಜೂನ್ 25ರಂದು ಅಂತ್ಯಗೊಳ್ಳಲಿದೆ.

ಇದೇ ವೇಳೆ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಜೆಡಿಎಸ್‌ನ ಗೋವಿಂದ ರಾಜು, ಕಾಂಗ್ರೆಸ್‌ನ ನಸೀರ್ ಅಹಮದ್, ತಿಪ್ಪಣ್ಣಪ್ಪ ಕಮಕನೂರ, ಬಿ.ಕೆ. ಹರಿಪ್ರಸಾದ್ ಹಾಗೂ ಬಿಜೆಪಿಯ ಎಂ.ಟಿ.ಬಿ. ನಾಗರಾಜು, ಪ್ರತಾಪ್ ಸಿಂಹ ನಾಯಕ್ ಮತ್ತು ಸುನಿಲ್ ವಲ್ಯಾಪುರೆ ಅವರ ಅವಧಿಯು ಜೂನ್ 30ರಂದು ಮುಕ್ತಾಯಗೊಳ್ಳಲಿದೆ. ಹೀಗಾಗಿ ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಚಟುವಟಿಕೆಗಳು ಗರಿಗೆದರಿವೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!