HomeGadag Newsಜೂ. 16ರೊಳಗೆ ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಿ

ಜೂ. 16ರೊಳಗೆ ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು, ಜೂನ್ ೧೬ರೊಳಗೆ ಪೂರ್ಣಗೊಳಿಸಬೇಕೆಂದು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಜಿಲ್ಲಾ ಉಪನಿರ್ದೇಶಕಿ ನಂದಾ ಹಣಬರಟ್ಟಿ ಸೂಚಿಸಿದರು.
ಸೋಮವಾರ ತಹಸೀಲ್ದಾರ್ ಕಚೇರಿಯಲ್ಲಿ ಮತದಾರರ ಸಂಕ್ಷಿಪ್ತ ಪರಿಷ್ಕರಣೆ-೨೦೦೬ರ ಕುರಿತು ಬಿಎಲ್‌ಓ ಮೇಲ್ವಿಚಾರಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮತಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಶೇ.೯೨ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ ಕಾರ್ಯವನ್ನು ಕೂಡ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
“೮೮ ಮಂದಿ ಮೇಲ್ವಿಚಾರಕರಿಗೆ ಎರಡು ಹಂತಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಪ್ರತಿಯೊಬ್ಬ ಮತಗಟ್ಟೆ ಮಟ್ಟದ ಅಧಿಕಾರಿ ಮನೆಮನೆ ಸಮೀಕ್ಷೆ ನಡೆಸಿ ಮತದಾರರ ಮಾಹಿತಿಯನ್ನು ಸಂಗ್ರಹಿಸಬೇಕು. ಎನ್ಯೂಮರೇಶನ್ ಫಾರ್ಮ್‌ನಲ್ಲಿ ದಾಖಲಾದ ಮಾಹಿತಿಯನ್ನು ಮೊಬೈಲ್ ಆಪ್‌ನಲ್ಲಿ ಮ್ಯಾಪಿಂಗ್ ಮಾಡಿ ಖಚಿತಪಡಿಸಿಕೊಂಡು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕು” ಎಂದು ಅವರು ಸೂಚಿಸಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗೋಪಾಲ ನಾಯ್ಕ, ಶಿರಸ್ತೇದಾರ ಎಸ್.ಎಸ್. ಅಸ್ಕಿ, ಪ್ರವೀಣ ಮೊಹರೇಕರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.”
ನಂದಾ ಹಣಬರಟ್ಟಿ, ಮತದಾರರ ನೋಂದಣಾಧಿಕಾರಿ
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img