HomeBengaluru Newsಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಮಳೆಯ ನಿರೀಕ್ಷೆ! ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಮಳೆಯ ನಿರೀಕ್ಷೆ! ಹವಾಮಾನ ಇಲಾಖೆ ಎಚ್ಚರಿಕೆ

For Dai;y Updates Join Our whatsapp Group

Spread the love

ಬೆಂಗಳೂರು: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ:

ಗದಗ, ಧಾರವಾಡ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವೆಡೆ 40–50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಹಳದಿ ಅಲರ್ಟ್:

ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ 30–40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ:

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದ್ದು, 30–40 ಕಿ.ಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ತಂಪಾದ ವಾತಾವರಣ ಮುಂದುವರಿಯಲಿದೆ.

ಇತರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ:

ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬಿರುಗಾಳಿಯ ವೇಗ 40–50 ಕಿ.ಮೀ ಇರಬಹುದು ಎಂದು ಅಂದಾಜಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಸಾರ್ವಜನಿಕರಿಗೆ ಎಚ್ಚರಿಕೆ:

ಮಳೆ ಮತ್ತು ಬಿರುಗಾಳಿ ಸಮಯದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು ಹಾಗೂ ಹಳೆಯ ಕಟ್ಟಡಗಳು ಮತ್ತು ಮರಗಳ ಕೆಳಗೆ ನಿಲ್ಲುವುದನ್ನು ತಪ್ಪಿಸಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ. ರೈತರು ತಮ್ಮ ಬೆಳೆ ಹಾಗೂ ಜಾನುವಾರುಗಳ ಸುರಕ್ಷತೆಗೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ಸಲಹೆ ನೀಡಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!