ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರ ಕುರಿತ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಟನ ಸ್ಥಿತಿ ಕಂಡು ಅಭಿಮಾನಿಗಳು ಗಾಬರಿಗೊಂಡಿದ್ದಾರೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ದರ್ಶನ್ ಅವರ ಆರೋಗ್ಯ ಮತ್ತು ಮಾನಸಿಕ ಸ್ಥಿತಿ ಕುರಿತು ವಿವಿಧ ರೀತಿಯ ಊಹಾಪೋಹಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದೇ ವೇಳೆ ವೈರಲ್ ಆಗಿರುವ ಫೋಟೋ ಕೂಡ ಸಾಕಷ್ಟು ಗಮನ ಸೆಳೆದಿದೆ.
ಇತ್ತೀಚೆಗೆ ಸುಪ್ರೀಂ ಕೋರ್ಟ್ 1 ವರ್ಷ ಜಾಮೀನು ತಿರಸ್ಕಾರ ಮಾಡಿರುವ ಹಿನ್ನೆಲೆ ದರ್ಶನ್ ಅವರು ಮಾನಸಿಕವಾಗಿ ಕುಗ್ಗಿದ್ದಾರೆ ಎಂಬ ಮಾತುಗಳು ಕೂಡ ಕೇಳಿಬರುತ್ತಿದೆ. ತಮ್ಮ ನೆಚ್ಚಿನ ನಾಯಕ ನಟನ ಇಂದಿನ ಪರಿಸ್ಥಿತಿ ಕಂಡು ಅಭಿಮಾನಿಗಳು ಆತಂಕ ಮತ್ತು ಭಾವುಕತೆಯನ್ನು ವ್ಯಕ್ತಪಡಿಸುತ್ತಿದ್ದಾರೆ.
ಆದರೆ, ದರ್ಶನ್ ಅವರ ಮಾನಸಿಕ ಸ್ಥಿತಿ ಅಥವಾ ಆರೋಗ್ಯದ ಬಗ್ಗೆ ಅಧಿಕೃತ ಮೂಲಗಳಿಂದ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು Ai ಫೋಟೋ ಆಗಿರಬಹುದು ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನೂ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳತ್ತ ಎಲ್ಲರ ಗಮನ ನೆಟ್ಟಿದೆ.



