HomeKarnataka Newsಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ ವಾಪಸ್: ಸರ್ಕಾರದ ನಿರ್ಧಾರ ರದ್ದುಪಡಿಸಲು ರಾಜ್ಯಪಾಲರಿಗೆ BJP ಮನವಿ

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ ವಾಪಸ್: ಸರ್ಕಾರದ ನಿರ್ಧಾರ ರದ್ದುಪಡಿಸಲು ರಾಜ್ಯಪಾಲರಿಗೆ BJP ಮನವಿ

For Dai;y Updates Join Our whatsapp Group

Spread the love

ಬೆಂಗಳೂರು: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣವನ್ನು ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ರಾಜ್ಯಪಾಲರ ಬಳಿ ಅಧಿಕೃತ ದೂರು ಸಲ್ಲಿಸಿದೆ.

ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗವು ಇಂದು ಮಧ್ಯಾಹ್ನ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ಪ್ರಕರಣ ಹಿಂಪಡೆಯುವ ಸರ್ಕಾರದ ಕ್ರಮವನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.

ದೂರಿನಲ್ಲಿ, ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣವನ್ನು ವಾಪಸ್ ಪಡೆಯುವ ಮೂಲಕ ಸರ್ಕಾರ ತಪ್ಪು ಸಂದೇಶ ರವಾನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಗಂಭೀರ ಪ್ರಕರಣವನ್ನು ಹಿಂಪಡೆಯುವ ನಿರ್ಧಾರವನ್ನು ಮರುಪರಿಶೀಲಿಸಿ, ಅದನ್ನು ರದ್ದುಗೊಳಿಸಲು ರಾಜ್ಯಪಾಲರು ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಲಾಗಿದೆ.

ಜೊತೆಗೆ, ಪ್ರಕರಣ ವಾಪಸ್ ಪಡೆಯಲು ಕೈಗೊಂಡಿರುವ ನಿರ್ಣಯವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಬಿಜೆಪಿ ನಿಯೋಗ ಮನವಿ ಪತ್ರದಲ್ಲಿ ಉಲ್ಲೇಖಿಸಿದೆ.

ಈ ಬೆಳವಣಿಗೆಯೊಂದಿಗೆ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ ಮತ್ತೊಮ್ಮೆ ರಾಜಕೀಯ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ನಿರ್ಧಾರವನ್ನು ಬಿಜೆಪಿ ಪ್ರಶ್ನಿಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!