HomeVijayanagarಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದು..!

ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದು..!

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: “ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಶಿಕ್ಷಕರು ಹೆಚ್ಚಿನ ಕಾಳಜಿ ವಹಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ” ಎಂದು ಶಾಸಕ ನೇಮಿರಾಜ್ ನಾಯ್ಕ್ ಹೇಳಿದರು.
ತಾಲೂಕಿನ ತಂಬ್ರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 2026-27ನೇ ಸಾಲಿನ ಶಾಲಾ ದಾಖಲಾತಿ, ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ಹಿಂದೆ ಶಿಕ್ಷಣ ಕೆಲವೇ ಜನರಿಗೆ ಸೀಮಿತವಾಗಿತ್ತು. ಆದರೆ ಈಗ ಸರ್ಕಾರ ಬಿಸಿಯೂಟ, ಸಮವಸ್ತ್ರ, ಮೊಟ್ಟೆ, ಹಾಲು, ಬಾಳೆಹಣ್ಣು ಸೇರಿದಂತೆ ಹಲವು ಸೌಲಭ್ಯಗಳನ್ನು ಮಕ್ಕಳಿಗೆ ನೀಡುತ್ತಿದೆ. ತಂದೆ-ತಾಯಿಗಳು ಮಕ್ಕಳ ಭವಿಷ್ಯಕ್ಕಾಗಿ ಕಷ್ಟಪಟ್ಟು ದುಡಿದು ಶಾಲೆಗೆ ಕಳುಹಿಸುತ್ತಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಉತ್ತಮ ಶಿಕ್ಷಣ ನೀಡುವುದು ಶಿಕ್ಷಕರ ಕರ್ತವ್ಯ” ಎಂದು ಹೇಳಿದರು.
ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಿ ಪುಸ್ತಕಗಳತ್ತ ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ನೀಡಿದ ಅವರು, ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲು ತಾವು ಬದ್ಧರಾಗಿದ್ದೇವೆ ಎಂದರು.
ಶಾಸಕರ ಅನುದಾನದಡಿ ಸುಮಾರು 3 ಸಾವಿರ ಮಕ್ಕಳು ಎಲ್‌ಕೆಜಿ ಹಾಗೂ ಯುಕೆಜಿ ಶಿಕ್ಷಣ ಪಡೆಯುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಿಸಲಾಯಿತು. ಎಲ್‌ಕೆಜಿ, ಯುಕೆಜಿ ಹಾಗೂ ಪ್ರಥಮ ತರಗತಿಗೆ ದಾಖಲಾದ ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಮಕ್ಕಳಿಗೆ ಗೋದಿ ಹುಗ್ಗಿ ಪಾಯಸದ ಸಿಹಿ ಊಟ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಆರ್. ಕವಿತಾ, ಇಒ ಪಾಲಯ್ಯನಕೋಟೆ ವಿಶ್ವನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಜಗದೀಶ್, ಕ್ಲಸ್ಟರ್ ಬಿಆರ್‌ಸಿ ಕನಕಪ್ಪ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ವೈ. ಮಲ್ಲಿಕಾರ್ಜುನ, ಜಿಲ್ಲಾ ಉಪಾಧ್ಯಕ್ಷ ಕೃಷ್ಣಮೂರ್ತಿ ಶೆಟ್ರು, ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಯು. ಕನಕಪ್ಪ, ಬಿ. ಸಿದ್ದರಾಜು, ಗೌರಜ್ಜನವರ ಬಸವರಾಜಪ್ಪ, ಬಣಕಾರ ಕೊಟ್ರೇಶ್, ಕಡ್ಡಿ ಚೆನ್ನಬಸಪ್ಪ, ಎಸ್. ವಿ. ಪಾಟೀಲ, ಕಡ್ಡಿ ಕೊಟ್ರೇಶ್, ಬಣಕಾರ ಮಲ್ಲಿಕಾರ್ಜುನ, ಸೊಬಟಿ ಹರೀಶ್, ಚಿತ್ರ ಕಲಾವಿದ ಚಿಂತ್ರಪಳ್ಳಿ ಕೊಟ್ರೇಶ್, ಬಂಡಿಕ್ಯಾಂಪ ಹನುಮೇಶ್, ಬಿ. ದೇವಿಪ್ರಸಾದ್, ಸಂಡೂರು ಮೆಹಬೂಬ್, ಬ್ಯಾಟಿ ನಾಗರಾಜ್, ಎಸ್‌ಡಿಎಂಸಿ ಅಧ್ಯಕ್ಷ ಹೆಚ್. ನೀಲಗಿರಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜಕುಮಾರ ನಾಯ್ಕ್, ತಂಬ್ರಹಳ್ಳಿ ಪಿಡಿಒ ಚಂದ್ರಶೇಖರ್, ಮುಖ್ಯ ಶಿಕ್ಷಕ ಹೆಚ್. ಎಂ. ಸಿದ್ದೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!