ವಿಜಯಸಾಕ್ಷಿ ಸುದ್ದಿ, ಗದಗ: ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಗುಡಿಮನಿ ನೇತೃತ್ವದ ನಿಯೋಗ ಭಾಗವಹಿಸಿ ಜಿಲ್ಲೆಯ ಕೈಗಾರಿಕಾ ವಸಾಹತುಗಳಲ್ಲಿ ಎದುರಾಗಿರುವ ಸಮಸ್ಯೆಗಳ ಕುರಿತು ಚರ್ಚಿಸಿತು.
ಸಭೆಯಲ್ಲಿ ಕೈಗಾರಿಕಾ ವಸಾಹತು ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ, ಕೈಗಾರಿಕಾ ನಿವೇಶನಗಳ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬ ಹಾಗೂ ಕೈಗಾರಿಕೆಗಳ ಸ್ಥಾಪನೆಗೆ ಎದುರಾಗುತ್ತಿರುವ ಅನಾನುಕೂಲತೆಗಳ ಬಗ್ಗೆ ಜಿಲ್ಲಾಡಳಿತದ ಗಮನ ಸೆಳೆಯಲಾಯಿತು.
ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಪೂರಕ ವಾತಾವರಣ ನಿರ್ಮಿಸಿ ಉದ್ಯಮಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ನಿಯೋಗ ಮನವಿ ಮಾಡಿತು.
ನಿಯೋಗದಲ್ಲಿ ಉಪಾಧ್ಯಕ್ಷರಾದ ಜಯದೇವ್ ಮೆಣಸಗಿ, ಪ್ರಕಾಶ್ ಉಗಲಾಟ್, ಶಿದ್ರಾಮಪ್ಪ ಉಮಚಗಿ ಹಾಗೂ ಸಹಕಾರ್ಯದರ್ಶಿ ಅಶೋಕ್ ಸಂಕಣ್ಣವರ ಭಾಗವಹಿಸಿದ್ದರು ಎಂದು ಕಾರ್ಯದರ್ಶಿ ಚನ್ನವೀರ ಹುಣಸಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



