HomeKarnataka Newsಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಅಧಿಕಾರ ಸ್ವೀಕಾರ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಅಧಿಕಾರ ಸ್ವೀಕಾರ

For Dai;y Updates Join Our whatsapp Group

Spread the love

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಬೆಳೆಸಿದ ಹಿರಿಯ ನಾಯಕ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಭವ್ಯ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದುಕೊಂಡು ಡಿ.ಕೆ. ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಹೊಸ ಆಡಳಿತಕ್ಕೆ ಚಾಲನೆ ನೀಡಿದರು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ರಾಜಕೀಯ ಮುಖಂಡರು, ಧಾರ್ಮಿಕ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮವು ವಿಶೇಷ ಆಕರ್ಷಣೆಯಾಗಿತ್ತು. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಾಯಕರು ಕೂಡ ಸಮಾರಂಭದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಇನ್ನು ಡಿ.ಕೆ. ಶಿವಕುಮಾರ್ ಅವರ ಪದಗ್ರಹಣಕ್ಕೆ ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ ಆಧಾರದ ಮೇಲೆ ವಿಶೇಷ ಮುಹೂರ್ತವನ್ನು ಆಯ್ಕೆ ಮಾಡಲಾಗಿತ್ತು. ಜ್ಯೋತಿಷಿಗಳ ಪ್ರಕಾರ ಅತ್ಯಂತ ಶಕ್ತಿಶಾಲಿ ಎಂದು ಪರಿಗಣಿಸಲಾಗುವ ‘ಮಾಲವ್ಯ ಯೋಗ’ದಲ್ಲಿ ಪ್ರಮಾಣವಚನ ಸ್ವೀಕರಿಸುವಂತೆ ಸಮಯ ನಿಗದಿಪಡಿಸಲಾಗಿತ್ತು.

ತುಲಾ ಲಗ್ನದಲ್ಲಿ ನಡೆದ ಈ ಪ್ರತಿಜ್ಞಾವಿಧಿಯು ಆಡಳಿತಾತ್ಮಕವಾಗಿ ಶುಭ ಫಲಗಳನ್ನು ನೀಡಲಿದೆ ಎಂಬ ನಂಬಿಕೆ ವ್ಯಕ್ತವಾಗಿದೆ. ಪ್ರಸ್ತುತ ಗ್ರಹಸ್ಥಿತಿಯಲ್ಲಿ ಗುರು ಗ್ರಹ ಉಚ್ಚ ಸ್ಥಾನದಲ್ಲಿದ್ದು, ದಶಮ ಭಾವ ಬಲಿಷ್ಠವಾಗಿರುವ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಎದುರಾಗುವ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಿ ಜನಪರ ಆಡಳಿತ ನೀಡಲು ಇದು ಅನುಕೂಲಕರವಾಗಲಿದೆ ಎಂದು ಜ್ಯೋತಿಷ್ಯ ವಲಯ ಅಭಿಪ್ರಾಯಪಟ್ಟಿದೆ.

ಸುದೀರ್ಘ ರಾಜಕೀಯ ಅನುಭವ, ಪಕ್ಷ ಸಂಘಟನೆಯಲ್ಲಿನ ಪರಿಶ್ರಮ ಮತ್ತು ಆಡಳಿತಾತ್ಮಕ ಸಾಮರ್ಥ್ಯದ ಮೂಲಕ ಗುರುತಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಕರ್ನಾಟಕದ ಅಭಿವೃದ್ಧಿಗೆ ಹೊಸ ದಿಕ್ಕು ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!